ಬೆಂಗಳೂರು: ಭಾರತದ ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಕರ್ನಾಟಕ ಬ್ಯಾಂಕ್ ಪ್ರಸ್ತುತ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಕರ್ನಾಟಕ ಬ್ಯಾಂಕ್ನಲ್ಲಿ ಪ್ರೊಬೇಷನರಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು ತಮ್ಮ ರೆಸ್ಯೂಮ್ ಕಳುಹಿಸುವ ಮೂಲಕ ಅಪ್ಲೈ ಮಾಡಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅಪ್ಲೈ ಮಾಡಿ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ.
ವಿದ್ಯಾರ್ಹತೆ: ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ. ಸಿಎ, ಸಿಎಸ್, ಸಿಎಂಎ, ಐಸಿಡಬ್ಲ್ಯೂಎ ಪದವೀಧರರು ಅರ್ಜಿ ಸಲ್ಲಿಸಬಹುದು. ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 28 ವರ್ಷ. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ 800 ರೂ ಅರ್ಜಿ ಶುಲ್ಕ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 700 ರೂ ಅರ್ಜಿ ಶುಲ್ಕವಿದೆ. ಬೆಂಗಳೂರು, ಚೆನ್ನೈ, ಮುಂಬೈ, ನವದೆಹಲಿ, ಹೈದರಾಬಾದ್, ಕೋಲ್ಕತ್ತಾ, ಪುಣೆ, ಮಂಗಳೂರು, ಧಾರವಾಡ, ಮೈಸೂರು, ಶಿವಮೊಗ್ಗ, ಕಲಬುರಗಿಯಲ್ಲಿ ಆನ್ಲೈನ್ ಮೂಲಕ ಪರೀಕ್ಷೆ ನಡೆಸಲಾಗುತ್ತದೆ. ನವೆಂಬರ್ 30ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಡಿಸೆಂಬರ್ 10 ಕೊನೆ ದಿನ ಆಗಿದೆ.