Bengaluru 26°C
Ad

ಕರ್ನಾಟಕ ಗ್ರಾಮೀಣ ಬ್ಯಾಂಕ್‌ ನ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ಖಾಲಿ ಇರುವ ಒಟ್ಟು 586 ಆಫೀಸ್ ಅಸಿಸ್ಟೆಂಟ್ , ಆಫೀಸರ್ ಹುದ್ದೆಗಳಿಗೆ ನೇಮಕಾತಿಯನ್ನು ಘೋಷಿಸಿದೆ.

ಬೆಂಗಳೂರು: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ಖಾಲಿ ಇರುವ ಒಟ್ಟು 586 ಆಫೀಸ್ ಅಸಿಸ್ಟೆಂಟ್ , ಆಫೀಸರ್ ಹುದ್ದೆಗಳಿಗೆ ನೇಮಕಾತಿಯನ್ನು ಘೋಷಿಸಿದೆ.

ಆಸಕ್ತ ಅಭ್ಯರ್ಥಿಗಳು 2024ರ ಜೂನ್ 27ರೊಳಗಾಗಿ ವೆಬ್ ಸೈಟ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.

ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 386, ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್ 200 ಸೇರಿ ಒಟ್ಟು 586 ಹುದ್ದೆಗಳಲ್ಲಿ ಆಫೀಸ್ ಅಸಿಸ್ಟೆಂಟ್ 200, ಆಫೀಸರ್ ಸ್ಕೇಲ್-1(ಅಸಿಸ್ಟೆಂಟ್ ಮ್ಯಾನೇಜರ್) 386 ಸ್ಥಾನಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು. ಆಫೀಸ್ ಅಸಿಸ್ಟೆಂಟ್ ಹುದ್ದಗೆ 18ರಿಂದ 28 ವರ್ಷ ಮತ್ತು ಆಫೀಸರ್ ಸ್ಕೇಲ್-1 (ಅಸಿಸ್ಟೆಂಟ್ ಮ್ಯಾನೇಜರ್) ಹುದ್ದೆಗೆ 18ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್ ಸಿ ಮತ್ತು ಎಸ್ ಟಿ ಅಭ್ಯರ್ಥಿ ಗಳಿಗೆ 5 ವರ್ಷ, ಒಬಿಸಿ (ಎನ್ ಸಿಎಲ್ ) ಅಭ್ಯರ್ಥಿ ಗಳಿಗೆ 3 ವರ್ಷ, ಪಿಡಬ್ಲ್ಯೂ ಬಿಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಇದೆ.

ಆಫೀಸರ್ ಹುದ್ದೆಗಳಿಗೆ ಎಸ್‌ಸಿ ಮತ್ತು ಎಸ್ ಟಿ, ಪಿಡಬ್ಲ್ಯೂ ಬಿಡಿ ಅಭ್ಯರ್ಥಿಗಳಿಗೆ 175 ರೂ., ಇತರ ಅಭ್ಯರ್ಥಿಗಳಿಗೆ 850 ರೂ. ಶುಲ್ಕ ವಿಧಿಸಲಾಗಿದೆ. ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್​) ಹುದ್ದೆಗಳಿಗೆ ಎಸ್ ಸಿ/ಎಸ್ ಟಿ/ಪಿಡಬ್ಲ್ಯೂ ಬಿಡಿ/ಇಎಸ್ ಎಂ/ಡಿಇಎಸ್ ಎಂ ಅಭ್ಯರ್ಥಿಗಳಿಗೆ 175 ರೂ., ಇತರ ಅಭ್ಯರ್ಥಿಗಳಿಗೆ 850 ರೂ. ಶುಲ್ಕ ವಿಧಿಸಲಾಗಿದ್ದು, ಆನ್‌ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ.

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ನೇರವಾಗಿ ನೋಂದಣಿ ಮಾಡಿಕೊಳ್ಳಲು ವೆಬ್ ಸೈಟ್ https://ibpsonline.ibps.in/rrb13oamay24/ ಅನ್ನು ಕ್ಲಿಕ್ ಮಾಡಿ. ಆಯ್ಕೆ ಪ್ರಕ್ರಿಯೆಯಲ್ಲಿ ಮೊದಲು ಅರ್ಹ ಅಭ್ಯರ್ಥಿಗಳಿಗೆ ಪೂರ್ವ ಭಾವಿ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಮುಖ್ಯ ಪರೀಕ್ಷೆ ನಡೆಸಿ ಆಯ್ಕೆಯಾದವರಿಗೆ ಸಂದರ್ಶನ ನಡೆಸಲಾಗುತ್ತದೆ. ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Ad
Ad
Nk Channel Final 21 09 2023
Ad