Bengaluru 25°C
Ad

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ; ಬಾಲಕಿಯರೇ ಮೇಲುಗೈ

Result

ಬೆಂಗಳೂರು:  ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಿದೆ. 149824 ವಿಧ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಆದ್ರೆ, ಪರೀಕ್ಷೆಗೆ ಹಾಜರಾಗಿದ್ದ 148942 ವಿದ್ಯಾರ್ಥಿಗಳ ಪೈಕಿ 52505 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ 35.25% ಫಲಿತಾಂಶ ಬಂದಿದೆ. ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶವನ್ನು ಇಲಾಖೆಯ ವೆಬ್‌ಸೈಟ್‌ karresults.nic.in ನಲ್ಲಿ ನೋಡಬಹುದಾಗಿದೆ.

ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಆದ್ರೆ, ಮೊದಲ ಹಂತದಲ್ಲಿ ಅನುತ್ತೀರ್ಣರಾಗಿ ಎರಡನೇ ಬಾರಿಗೆ ರಾಜ್ಯಾದ್ಯಂತ ಒಟ್ಟು 301 ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ 29 ರಿಂದ ಮೇ 16ರವರೆಗೆ 2ನೇ ಪರೀಕ್ಷೆಗಳು ನಡೆಸಲಾಗಿತ್ತು. 7,875 ಮೌಲ್ಯಮಾಪಕರಿಂದ 28 ಕೇಂದ್ರಗಳಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆದಿತ್ತು. ಪರೀಕ್ಷೆ 2ಕ್ಕೆ 1,49,824 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 1,48,942 ವಿದ್ಯಾರ್ಥಿಗಳು ಹಾಜರಾಗಿದ್ದು, 52,505 ವಿದ್ಯಾರ್ಥಿಗಳು ಪಾಸಾಗಿದ್ದಾರೆ. 35.25ರಷ್ಟು ಶೇಕಡವಾರು ಫಲಿತಾಂಶ ಬಂದಿದೆ. ಹಾಗೇ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ 84,632 ಬಾಲಕರು ಹಾಜರಾಗಿದ್ದರು. ಇವರಲ್ಲಿ 26,496 ಬಾಲಕರು ಉತ್ತೀರ್ಣರಾಗಿದ್ದಾರೆ. ಶೇ.31.31ರಷ್ಟು ಫಲಿತಾಂಶ ಬಂದಿದೆ. 64,310 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ. ಇವರಲ್ಲಿ 26,009 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.

Ad
Ad
Nk Channel Final 21 09 2023
Ad