ಬೆಂಗಳೂರು: ಇದೇ ಜೂನ್ 25ರಿಂದ ಜುಲೈ5 ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟವಾಗಿದೆ.
2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ3 ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಇಂದು(ಜುಲೈ 16) ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 75466 ವಿದ್ಯಾರ್ಥಿಗಳ ಪೈಕಿ 17,911 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.21.65 ಬಾಲಕರು ಪಾಸ್ ಆಗಿದ್ದರೆ, ಶೇ. 26.55 ಬಾಲಕಿಯರು ಉತೀರ್ಣರಾಗಿದ್ದಾರೆ. ಈ ಮೂಲಕ ಮತ್ತೊಮ್ಮೆ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಅಧಿಕೃತ ಕೆಎಸ್ಇಎಬಿ (KSEAB) ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶ ವೀಕ್ಷಿಸಿ

