ಬೆಂಗಳೂರು: ಕೆಎಎಸ್ ಪ್ರಿಲಿಮ್ಸ್ ಪರೀಕ್ಷೆ ಇಂದು ನಡೆಯುತ್ತಿದೆ. ಪರೀಕ್ಷೆಯಲ್ಲಿ ಸುಮಾರು 2.5 ಲಕ್ಷ ಆಕಾಂಕ್ಷಿಗಳು ಭಾಗಿಯಾಗಲಿದ್ದಾರೆ. KAS ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಕೆಲವು ಆಕಾಂಕ್ಷಿಗಳು ಪ್ರತಿಭಟನೆ ನಡೆಸಿದ್ದರು.

ಆಲ್ ಕರ್ನಾಟಕ ಸ್ಟೇಟ್ ಸ್ಟೂಡೆಂಟ್ಸ್ ಅಸೋಸಿಯೇಷನ್​​ನಿಂದ ನಗರದ ಫ್ರೀಡಂ ಪಾರ್ಕ್​ನಲ್ಲಿ ಕೆಎಎಸ್ ಆಕಾಂಕ್ಷಿಗಳು ಪ್ರತಿಭಟನೆ ಮಾಡಿದ್ದರು. ಈ ಹೋರಾಟಕ್ಕೆ ಕೆಲವು ಬಿಜೆಪಿ ನಾಯಕರು ಸಾಥ್ ನೀಡಿದ್ದರು. ಕೊನೆ ಕ್ಷಣದವರೆಗೂ ಪರೀಕ್ಷೆ ಪೋಸ್ಟ್ ಪೋನ್ ಮಾಡಿಸುವ ಯತ್ನ ಮಾಡಲಾಗಿತ್ತು.

ರಾಜ್ಯ ಸರ್ಕಾರ ಹಾಗೂ ಕೆಪಿಎಸ್​ಸಿ ತನ್ನ ನಿರ್ಧಾರ ಬದಲಿಸಿಲ್ಲ. ಆಗಸ್ಟ್ 27ಕ್ಕೆ KAS ಪರೀಕ್ಷೆ ನಡೆದೆ ನಡೆಯುತ್ತೆ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಅದರಂತೆ ಇಂದು ರಾಜ್ಯಾದ್ಯಂತ ಪರೀಕ್ಷೆ ಆಯೋಜನೆ ಆಗಿದೆ. ಒಟ್ಟು 384 ಹುದ್ದೆಗಳಿಗಾಗಿ ಪರೀಕ್ಷೆ ನಡೆಯುತ್ತಿವೆ. 2017-18 ಸಾಲಿನ ವಿದ್ಯಾರ್ಥಿಗಳಿಗೆ ಸರ್ಕಾರ ಪರೀಕ್ಷೆ ಬರೆಯಲು ಕೊನೆ ಅವಕಾಶ ಕಲ್ಪಿಸಿದೆ. ಹೀಗಾಗಿ 2017-18 ಬ್ಯಾಚ್​ನ 1500ಕ್ಕೂ ಹೆಚ್ಚು ಮಂದಿ ಈ ಪರೀಕ್ಷೆ ಬರೆಯಲಿದ್ದಾರೆ.