ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ನೇಮಕಾತಿಗಾಗಿ ಕಳೆದ ಮಾರ್ಚ್ 13ರಂದು ಅಧಿಸೂಚನೆ ಹೊರಡಿಸಿತ್ತು. ಇದೀಗ ಅದಕ್ಕೆ ಸಂಬಂಧಿಸಿದಂತೆ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ, ಜಲಸಂಪನ್ಮೂಲ ಇಲಾಖೆ, ಅಂತರ್ಜಲ ನಿರ್ದೇಶನಾಲಯ, ಕಾರ್ಖಾನೆಗಳು, ಬಾಯ್ಲರ್‌ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ,
ಆಯುಷ್ ಇಲಾಖೆಯಲ್ಲಿನ ಹೋಮಿಯೋಪತಿ, ಪದವಿ ಪೂರ್ವ ವಿದ್ಯಾರ್ಹತೆಯ ವಿವಿಧ ಇಲಾಖೆ, ಹೀಗೆ ಹಲವು ಇಲಾಖೆಗಳ ಗ್ರೂಪ್ ಎ, ಗ್ರೂಪ್ ಬಿ, ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧ, ಇದೀಗ ಕೆಪಿಎಸ್‌ಸಿ ನೇಮಕ ಪ್ರಕ್ರಿಯೆಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವೇಳಾಪಟ್ಟಿ ಬಿಡುಗಡೆ ಮಾಡಿದೆ.
1) ಕಾರ್ಖಾನೆಗಳು, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿನ ಬಾಯ್ಲರುಗಳ ಸಹಾಯಕ ನಿರ್ದೇಶಕರು 03 ಹುದ್ದೆಗಳು (ಉಳಿಕೆ ಮೂಲ ವೃಂದ)ಕ್ಕೆ- ಸೆಪ್ಟೆಂಬರ್ 18ರಂದು ಮಧ್ಯಾಹ್ನ ಪರೀಕ್ಷೆ ನಡೆಯಲಿದೆ.
2) ಅಂತರ್ಜಲ ನಿರ್ದೇಶನಾಲಯದಲ್ಲಿನ ಭೂ ವಿಜ್ಞಾನಿ (ಉಳಿಕೆ ಮೂಲ ವೃಂದ) – 10 ಹುದ್ದೆಗಳು- ಸೆಪ್ಟೆಂಬರ್ 19 ರಂದು ಮಧ್ಯಾಹ್ನ ಪರೀಕ್ಷೆ ನಡೆಯಲಿದೆ.
3) ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್) (ವಿಭಾಗ-1) – 10 ಹುದ್ದೆಗಳು (ಉಳಿಕೆ ಮೂಲ ವೃಂದ) ಸೆಪ್ಟೆಂಬರ್ 26 ರಂದು ಮಧ್ಯಾಹ್ನ ಪರೀಕ್ಷೆ ನಡೆಯಲಿದೆ.
4) ಕಾರ್ಖಾನೆಗಳು, ಬಾಯ್ಲರ್‌ಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿನ ಕಾರ್ಖಾನೆಗಳ ಸಹಾಯಕ ನಿರ್ದೇಶಕರು 07 ಹುದ್ದೆಗಳು (ಉಳಿಕೆ ಮೂಲ ವೃಂದ) ಸೆಪ್ಟೆಂಬರ್ 27 ರಂದು ಮಧ್ಯಾಹ್ನ ಪರೀಕ್ಷೆ ನಡೆಯಲಿದೆ.
5) ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿನ ಭೂ ದಾಖಲೆಗಳ ಸಹಾಯಕ ನಿರ್ದೇಶಕರು 24 ಹುದ್ದೆಗಳು (ಉಳಿಕೆ ಮೂಲ ವೃಂದ) ಅಕ್ಟೋಬರ್ 5ರಂದು ಪರೀಕ್ಷೆ ನಡೆಯಲಿದೆ.
6) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್) (ವಿಭಾಗ-1) 92 ಹುದ್ದೆಗಳು (ಉಳಿಕೆ ಮೂಲ ವೃಂದ) ಅಕ್ಟೋಬರ್ 6 ರಂದು ಪರೀಕ್ಷೆ ನಡೆಯಲಿದೆ.

