ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಯೂನಾನಿ ಮತ್ತು ಹೋಮಿಯೋಪಥಿ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹತೆ ಪಡೆದು, ರಾಜ್ಯದವರೆಂದು ಕ್ಲೇಮ್ ಮಾಡಿರುವ 92,858 ಮಂದಿಯ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
ಪಟ್ಟಿಯಲ್ಲಿ ಅತಿ ಹೆಚ್ಚು ಅಂಕ (716 ಅಂಕ) ಪಡೆದ ಪದ್ಮನಾಭ ಮೆನನ್ ಮೊದಲ ಸ್ಥಾನದಲ್ಲಿ ಇದ್ದಾರೆ. ಅತಿ ಕಡಿಮೆ ಅಂದರೆ 127 ಅಂಕ ಪಡೆದವರು ಕೂಡ ಈ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ವೈದ್ಯಕೀಯ ಕೋರ್ಸ್‌ಗೆ ಅರ್ಹತೆ ಪಡೆದು ಇನ್ನೂ ಅರ್ಜಿ ಸಲ್ಲಿಸದೇ ಇರುವವರಿಗೆ ಒಂದೆರಡು ದಿನದಲ್ಲಿ ಹೊಸದಾಗಿ ನೋಂದಣಿ ಮಾಡಿಕೊಳ್ಳಲು ಲಿಂಕ್ ಬಿಡುಗಡೆ ಮಾಡಲಾಗುವುದು. ಅದರ ನಂತರ ನೀಟ್ ಅಂಕ ದಾಖಲಿಸಲು ಎಲ್ಲ ಅರ್ಹರಿಗೂ ಅವಕಾಶ ನೀಡಲಾಗುವುದು ಎಂದು ಅವರು ವಿವರಿಸಿದ್ದಾರೆ.
Ad