ಬೆಂಗಳೂರು: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ –ನೀಟ್‌ 2024 ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದ್ದು ಕರ್ನಾಟಕದ 6 ವಿದ್ಯಾರ್ಥಿಗಳು ಅತ್ಯುನ್ನತ ಸ್ಥಾನ ಪಡೆದುಕೊಂಡಿದ್ದಾರೆ. ದೇಶದಲ್ಲಿ ಟಾಪ್​ 100 ವಿದ್ಯಾರ್ಥಿಗಳ ಲಿಸ್ಟ್​ನಲ್ಲಿ ರಾಜ್ಯದ 6 ವಿದ್ಯಾರ್ಥಿಗಳು ಸೇರಿಕೊಂಡಿದ್ದಾರೆ.

ನೀಟ್‌ ಬರೆದ ವಿದ್ಯಾರ್ಥಿಗಳ ಪೈಕಿ ಆಲ್‌ ಇಂಡಿಯಾ ರ‍್ಯಾಂಕ್- 1ಅನ್ನು 720 ಅಂಕಗಳಿಗೆ 720 ಅಂಕ ಪಡೆಯುವ ಮೂಲಕ ಅರ್ಜುನ್‌ ಕಿಶೋರ್‌ ಎನ್ನುವ ವಿದ್ಯಾರ್ಥಿ ಸಾಧನೆ ಮಾಡಿದ್ದಾರೆ. ಇಡೀ ದೇಶಕ್ಕೆ ಅರ್ಜುನ್ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಕರ್ನಾಟಕದ ವಿದ್ಯಾರ್ಥಿಗಳಾದ ವಿ.ಕಲ್ಯಾಣ್, ಶ್ಯಾಮ್ ಶ್ರೇಯಸ್ ಜೋಸೆಫ್‌, ಅರ್ಜುನ್ ಕಿಶೋರ್, ಪದ್ಮನಾಭ್ ಮೆನನ್, ಪ್ರಜ್ಞಾ ಪಿ.ಶೆಟ್ಟಿ, ಖುಷಿ ಮಗನೂರ್ ಎಂಬ ವಿದ್ಯಾರ್ಥಿಗಳು ಟಾಪ್​ 100ರಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಶೇ.99.98 ಅಂಕಗಳನ್ನು ಗಳಿಸುವ ಮೂಲಕ ಟಾಪರ್ ಎನಿಸಿಕೊಂಡಿದ್ದಾರೆ. ಇನ್ನು ನೀಟ್ ರಿಸಲ್ಟ್​ ಅನ್ನು ನ್ಯಾಷನಲ್‌ ಟೆಸ್ಟಿಂಗ್ ಏಜೆನ್ಸಿಯು ಬಿಡುಗಡೆ ಮಾಡಿದ್ದು ಪರೀಕ್ಷೆ ಬರೆದ 24 ಲಕ್ಷ ಅಭ್ಯರ್ಥಿಗಳು ಎನ್‌ಟಿಎ ನೀಟ್‌ ಪೋರ್ಟಲ್‌ನಲ್ಲಿ ಲಾಗಿನ್‌ ಆಗುವ ಮೂಲಕ ಚೆಕ್‌ ತಮ್ಮ ರಿಸಲ್ಟ್ ಪರಿಶೀಲನೆ ಮಾಡಬಹುದಾಗಿದೆ.