ನವದೆಹಲಿ: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಆಗಸ್ಟ್ 11ರಂದು ಎರಡು ಪಾಳಿಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ನೀಟ್ ಪಿಜಿ ಪರೀಕ್ಷೆಯಲ್ಲಿ ಅಕ್ರಮ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಪರೀಕ್ಷಾ ದಿನಾಂಕ ಮುಂದೂಡಲಾಗಿತ್ತು. ಇದೀಗ ಪರೀಕ್ಷಾ ದಿನಾಂಕ ಘೋಷಣೆಯಾಗಿದೆ. ಬೆಳಿಗ್ಗೆ ಹಾಗೂ ಮಧ್ಯಾಹ್ನ ಎರಡು ಪಾಳಿಯಲ್ಲಿ ಪರೀಕ್ಷೆ ನಡೆಯಲಿದೆ. ಈ ಹಿಂದೆ ಜೂನ್ 23ರಂದು ನೀಟ್ ಪರೀಕ್ಷೆ ನಿಗದಿಯಾಗಿತ್ತು. ಅಕ್ರಮ ನಡೆಯುವ ಸುಳಿವು ಹಿನ್ನೆಲೆಯಲ್ಲಿ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿತ್ತು.

