ನವದೆಹಲಿ: ಈ ವರ್ಷ ನಡೆದ ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿರುವುದು ಇಡೀ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದ್ದು, ಕೇಸ್ ಸುಪ್ರೀಂ ಕೋರ್ಟ್ನಲ್ಲಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಈಗಾಗಲೇ ಕೇಂದ್ರ ಸರ್ಕಾರ ತನ್ನ ನಿಲುವು ಸುಪ್ರೀಂಕೋರ್ಟ್ಗೆ ತಿಳಿಸಿದ್ದು, ಪರೀಕ್ಷೆ ರದ್ದುಗೊಳಿಸೋ ಉದ್ದೇಶವಿಲ್ಲ ಎಂದು ಹೇಳಿದೆ. ಇದರ ಬೆನ್ನಲ್ಲೇ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ ನೀಡಿದೆ.
ನೀಟ್ ಪರೀಕ್ಷೆ ಅನ್ನೋದು ಬರೋಬ್ಬರಿ 23 ಲಕ್ಷ ವಿದ್ಯಾರ್ಥಿಗಳ ಭವಿಷ್ಯ. ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಸ್ಪಷ್ಟ. ನೀಟ್ ಪರೀಕ್ಷೆ ರದ್ದು ಎಂಬುದು ಕೊನೆಯ ಆಯ್ಕೆಯಾಗಬೇಕು. ದೇಶದ ಪ್ರತಿಯೊಂದು ಮಧ್ಯಮ ವರ್ಗದ ಕುಟುಂಬ ನೀಟ್, ಜೆಇಇ ಪಾಸ್ ಮಾಡೋ ಗುರಿ ಹೊಂದಿದೆ.
ಹಾಗಾಗಿ ನೀಟ್ ರದ್ದು ಮಾಡುವುದು ಬಹಳಷ್ಟು ವಿದ್ಯಾರ್ಥಿಗಳ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಮರು ಪರೀಕ್ಷೆಗೆ ಆದೇಶ ಮಾಡುವಾಗ ಎಚ್ಚರ ಇರಲಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

