ಈ ಬಾರಿಯ ನೀಟ್‌ ಪರೀಕ್ಷೆಯ ಫಲಿತಾಂಶ ಜೂ.4ರಂದು ಪ್ರಕಟಗೊಂಡಿದೆ. ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮೇ 5ರಂದು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು ನಡೆಸಿತ್ತು.

ಇನ್ನೂ ನೀಟ್‌ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಮೇ 29 ರಂದು ಬಿಡುಗಡೆ ಮಾಡಲಾಗಿತ್ತು. ಇದಕ್ಕೆ ಆಕ್ಷೇಪಣೆ ಸಲ್ಲಿಸಿದ ಬಳಿಕ ಅಂತಿಮ ಕೀ ಉತ್ತರಗಳನ್ನು ಜೂನ್ 3 ರಂದು ಬಿಡುಗಡೆ ಮಾಡಲಾಗಿತ್ತು. ಈಗಾಗಲೇ ಬಿಡುಗಡೆಯಾಗಿರುವ ಅಂತಿಮ ಕೀ ಉತ್ತರಗಳ ಆಧಾರದ ಮೇಲೆ ನೀಟ್ ಯುಜಿ 2024ರ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ರಿಸಲ್ಟ್‌ ನೋಡಲು ಹೀಗೆ ಮಾಡಿ
-‌ NTA ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
-ಮುಖಪುಟದಲ್ಲಿ ಲಭ್ಯವಿರುವ ನೀಟ್ ಯುಜಿ ಫಲಿತಾಂಶ 2024 ಲಿಂಕ್ ಅನ್ನು ಕ್ಲಿಕ್ ಮಾಡಿ.
-ಲಾಗಿನ್ ವಿವರಗಳನ್ನು ನಮೂದಿಸಿ ಮತ್ತು ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ.
-ನಿಮ್ಮ ಫಲಿತಾಂಶವನ್ನು ಪರಿಶೀಲಿಸಿ ಮತ್ತು ಪುಟವನ್ನು ಡೌನ್‌ಲೋಡ್‌ ಮಾಡಿಕೊಳ್ಳಿ. ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಇರಿಸಿಕೊಳ್ಳಿ

ಇನ್ನೂ ಎನ್‌ಟಿಎ ಶೀಘ್ರದಲ್ಲೇ ಕಟ್ ಆಫ್ ಜತೆಗೆ ಟಾಪರ್ಸ್‌ಗಳ ಹೆಸರುಗಳನ್ನು ಪ್ರಕಟಿಸಲಿದೆ.