Ad

ನೀಟ್‌- ಯುಜಿ 2024ರ ಪರೀಕ್ಷೆಯ ಪರಿಷ್ಕೃತ ಫಲಿತಾಂಶ ಪ್ರಕಟ

Ug

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸಿದ್ದ ನೀಟ್‌- ಯುಜಿ 2024ರ ಮರು ಪರೀಕ್ಷೆಯ ನಂತರ ಪರಿಷ್ಕೃತ ಫಲಿತಾಂಶ ಪ್ರಕಟಗೊಂಡಿದೆ. ಮೇ 5ರಂದು ನಡೆದ ಪ್ರಮುಖ ವಿಷಯಗಳ ಪರೀಕ್ಷೆಯಲ್ಲಿ 1563 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಜೂನ್‌ 28ರಂದು ನಡೆದ ಮರು ಪರೀಕ್ಷೆಯಲ್ಲಿ 813 ವಿದ್ಯಾರ್ಥಿಗಳು ಮಾತ್ರ ಹಾಜರಾಗಿದ್ದು, ಶೇ.47ರಷ್ಟು ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

Ad
300x250 2

ನೀಟ್‌-ಯುಜಿ ಮರು ಪರೀಕ್ಷೆಯ ಕೀ ಉತ್ತರಗಳು, ಓಎಂಆರ್‌ ಶೀಟ್‌ ಸ್ಕ್ಯಾನಿಂಗ್‌ ಪ್ರಕಟಿಸುವ ಮೂಲಕ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಇಂದು (ಜುಲೈ 1) ಪರಿಷ್ಕೃತ ಫಲಿತಾಂಶ ಪ್ರಕಟಿಸಿದೆ.

ಪರೀಕ್ಷೆ ಬರೆದಿದ್ದ ಎಲ್ಲಾ ಅಭ್ಯರ್ಥಿಗಳ ರ್ಯಾಂಕಿಂಗ್‌ ಬದಲಾಗಿದೆ. ಪರೀಕ್ಷಾ ಫಲಿತಾಂಶವನ್ನು ವಿದ್ಯಾರ್ಥಿಗಳು ಸಂಸ್ಥೆಯ ವೆಬ್‌ಸೈಟ್‌ನಲ್ಲಿ ಪಡೆಯಬಹುದಾಗಿದೆ.

Ad
Ad
Nk Channel Final 21 09 2023
Ad