Bengaluru 22°C
Ad

ನೀಟ್-ಯುಜಿ ಪರೀಕ್ಷೆ ರದ್ದು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ವಿದ್ಯಾರ್ಥಿಗಳು

Exam

ವದೆಹಲಿ: ನೀಟ್ -ಯುಜಿ ಪರೀಕ್ಷೆ ರದ್ದುಗೊಳಿಸುವಂತೆ ಕೋರಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಮೇ 5ರಂದು ನಡೆದ ನೀಟ್ -ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳ ಬಗ್ಗೆ ಸಿಬಿಐ ಅಥವಾ ಇತರ ಯಾವುದೇ ಸ್ವತಂತ್ರ ಸಂಸ್ಥೆಯಿಂದ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಅರ್ಜಿದಾರರು ಕೋರಿದ್ದಾರೆ.

ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದ 20 ವಿದ್ಯಾರ್ಥಿಗಳು ಈ ಅರ್ಜಿ ಸಲ್ಲಿಸಿದ್ದು, ಪರೀಕ್ಷೆಯನ್ನು ಹೊಸದಾಗಿ ನಡೆಸಲು ಎನ್.ಟಿ.ಎ.ಗೆ ಅಥವಾ ಸಂಬಂಧಿಸಿದವರಿಗೆ ನಿರ್ದೇಶನ ನೀಡುವಂತೆ ಕೋರಿದ್ದಾರೆ. 620ಕ್ಕೂ ಮೇಲ್ಪಟ್ಟು ಅಂಕಗಳಿಸಿದ ವಿದ್ಯಾರ್ಥಿಗಳ ಉತ್ತರದ ದತ್ತಾಂಶದ ಮಾಹಿತಿಯನ್ನು ಹೆಚ್ಚಿನ ಮುತುವರ್ಜಿಯಿಂದ ತನಿಖೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ಮೊರೆ ಹೋಗಿರುವ ವಿದ್ಯಾರ್ಥಿಗಳು ಕೋರಿದ್ದಾರೆ.

Ad
Ad
Nk Channel Final 21 09 2023
Ad