Ad

ಖಾಸಗಿ ಪ್ರೌಢಶಾಲೆ, ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಆದೇಶ

ಶಿಕ್ಷಕ, ಬೋಧಕ ಹುದ್ದೆಗಳ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ್ದು, ದಿನಾಂಕ 1-1-2016ರಿಂದ 31.12 2020 ರ ವರೆಗೆ ಅನುದಾನಿತ ಶಾಲೆಗಳಲ್ಲಿ ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ ಇರುವ ಬೋಧಕ ಹುದ್ದೆಗಳನ್ನು ತುಂಬಲು ಸರ್ಕಾರ ಅಧಿಕೃತ ಆದೇಶ ನೀಡಿದೆ.

ಬೆಂಗಳೂರು: ಶಿಕ್ಷಕ, ಬೋಧಕ ಹುದ್ದೆಗಳ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ್ದು, ದಿನಾಂಕ 1-1-2016ರಿಂದ 31.12 2020 ರ ವರೆಗೆ ಅನುದಾನಿತ ಶಾಲೆಗಳಲ್ಲಿ ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ ಇರುವ ಬೋಧಕ ಹುದ್ದೆಗಳನ್ನು ತುಂಬಲು ಸರ್ಕಾರ ಅಧಿಕೃತ ಆದೇಶ ನೀಡಿದೆ.

ರಾಜ್ಯದಲ್ಲಿ 1994-95ರ ಶೈಕ್ಷಣಿಕ ಅವಧಿಗೆ ಪೂರ್ವದಲ್ಲಿ ಆರಂಭಗೊಂಡು ಈಗಾಗಲೇ ವೇತನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆ, ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ 2016ರಿಂದ 2020ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಅನುಮೋದನೆ ನೀಡಿದೆ.

ಈ ಮೊದಲು 1987ರಿಂದ 1994-95ರ ಅವಧಿಯಲ್ಲಿ ಆರಂಭವಾದ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಹಣಕಾಸು ಇಲಾಖೆಯು ಅನುಮತಿ ನೀಡಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆದೇಶವನ್ನು ಮಾರ್ಪಡಿಸಿರುವ ಶಿಕ್ಷಣ ಇಲಾಖೆಯು, 1994-95ರ ಶೈಕ್ಷಣಿಕ ಅವಧಿಗೆ ಪೂರ್ವದಲ್ಲಿ ಆರಂಭಗೊಂಡ ಎಲ್ಲ ಸಂಸ್ಥೆಗಳಿಗೂ ಅನುಮತಿ ನೀಡಿ ಆದೇಶ ಹೊರಡಿಸಿದೆ.

ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಾಗ ನಿಯಮಾನುಸಾರ ರೋಸ್ಟರ್ ಬಿಂದು ಮತ್ತು ಕಲ್ಯಾಣ ಕರ್ನಾಟಕದ ಮೀಸಲಾತಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. 2016-17ರಿಂದ 2023-24ನೇ ಸಾಲಿನವರೆಗೆ ವಿದ್ಯಾರ್ಥಿಗಳ ದಾಖಲಾತಿ, ಪರೀಕ್ಷಾ ಲಿತಾಂಶ ಮತ್ತು ಮೂಲಭೂತ ಸೌಕರ್ಯಗಳು ಉತ್ತಮವಾಗಿರುವುದನ್ನು ಖಚಿತಪಡಿಸಿಕೊಳ್ಳುವುದು. ಹುದ್ದೆ ಭರ್ತಿ ಮಾಡಿಕೊಳ್ಳುವ ಶಾಲಾ, ಕಾಲೇಜುಗಳು ಆರಂಭವಾದ ಅಂದಿನಿಂದ ನಿರಂತರವಾಗಿ ನಡೆಯುತ್ತಿರುವುದನ್ನು ಖಚಿತಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

Ad
Ad
Nk Channel Final 21 09 2023