ಬೆಂಗಳೂರು: ಈ ಬಾರಿಯ 2024-25ನೇ ಸಾಲಿನ ಸ್ನಾತ್ತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದೂಡಿದೆ. ಇನ್ನು ಹೊಸ ದಿನಾಂಕವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ ಎನ್ನಲಾಗಿದೆ.
ಈ ಹಿಂದೆ ಜುಲೈ 13 ರಂದು ಎಂಇ, ಎಂ ಟೆಕ್, ಎಂ ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಹಾಗೂ ಜುಲೈ 14ರಂದು ಎಂಸಿಎ ಮತ್ತು ಎಂಬಿಎ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ನಿಗದಿಯಾಗಿತ್ತು. ಆದರೆ, ವಿವಿಧ ವಿಶ್ವವಿದ್ಯಾಲಯಗಳ ಪದವಿ ತರಗತಿಗಳ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಜುಲೈ 5 ಮತ್ತು 10ರಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಪಿಜಿಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಪರೀಕ್ಷೆಗಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದ್ದು, ಜುಲೈ 7ರವರೆಗೆ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಜುಲೈ 9ರ ಸಂಜೆ 6 ಗಂಟೆಯೊಳಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ https://kea.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ತಿಳಿಸಿದ್ದಾರೆ.

