ಬೆಂಗಳೂರು : PGCET-2024ರ MBA, MCA ME, Mtech, M ARCHITECTURE ಕೋರ್ಸ್ ಗಳ ಪ್ರವೇಶಕ್ಕೆ ನಡೆದ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ತಿಳಿಸಿದೆ.
ತನ್ನ ಅಧಿಕೃತ ಜಾಲತಾಣದಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು ಎಂದು ಕೆಇಎ ಹೇಳಿದೆ. ಅನ್ ಲೈನ್ ಅರ್ಜಿಯಲ್ಲಿ ದಾಖಲಿಸಿರುವ ಮಾಹಿತಿಯನ್ನು ಆಧರಿಸಿ ವೆರಿಫಿಕೇಷನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಬಹುದು. ಸೀಟು ಹಂಚಿಕೆ ನಂತರ ಪ್ರಮಾಣ ಪತ್ರಗಳನ್ನು ಕಾಲೇಜಿಗೆ ಸಲ್ಲಿಸಬೇಕು.
ಅರ್ಜಿಯಲ್ಲಿನ ಮಾಹಿತಿ ತಪ್ಪಾಗಿದ್ದಲ್ಲಿ ಅಥವಾ ಸ್ನಾತಕೋತ್ತರ ಸೀಟು ಪಡೆಯಲು ಅರ್ಹತೆ ಇಲ್ಲದಿದ್ದರೂ ಸುಳ್ಳು ಮಾಹಿತಿ ಕೊಟ್ಟು ಪ್ರವೇಶ ಪಡೆದರೆ ಅದಕ್ಕೆ ಅಭ್ಯರ್ಥಿಗಳೇ ನೇರವಾಗಿ ಹೊಣೆಗಾರರಾಗುತ್ತಾರೆ. ಅಂತಹ ಪ್ರವೇಶಗಳನ್ನು ಯಾವುದೇ ಸಂದರ್ಭದಲ್ಲಿ ರದ್ದುಪಡಿಸಲಾಗುವುದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು ತಿಳಿಸಿದ್ದಾರೆ.
Ad