ಬೆಂಗಳೂರು: ಸಹಾಯಕ ಲೋಕೋ ಪೈಲಟ್ ಮುಂಬಡ್ತಿ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ನೈಋತ್ಯ ರೈಲ್ವೆ ಆದೇಶ ಹೊರಡಿಸಿದೆ. ರೈಲ್ವೇ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಗಳನ್ನು ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ಬರೆಯಬೇಕಿತ್ತು.
ಇದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾದ ಬಳಿಕ ಕೇಂದ್ರ ರೈಲ್ವೇ ಸಚಿವ ಸೋಮಣ್ಣ ಕನ್ನಡದಲ್ಲಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ಮಾಡಿಕೊಡುವುದಾಗಿ ಕಳೆದ ಬಾರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು. ವಿ. ಸೋಮಣ್ಣ ಅವರ ಸೂಚನೆ ಮೇರೆಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ.
ಸಾಮಾನ್ಯ ವಿಭಾಗೀಯ ಸ್ಪರ್ಧಾತ್ಮಕ ಸಹಾಯಕ ಲೋಕೋಪೈಲಟ್ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸುವ ಕುರಿತು ನೈಋತ್ಯ ರೈಲ್ವೆ ವಲಯ ಅಧಿಕೃತ ಆದೇಶ ಹೊರಡಿಸಿದೆ.
Ad