ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ರಾಜ್ಯಾದ್ಯಂತ ಇಂದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು. ಈಗಾಗಲೇ ಪರೀಕ್ಷೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಪರೀಕ್ಷೆಯಲ್ಲಿ ಯಾವುದೇ ರೀತಿಯಾದಂತಹ ಅಕ್ರಮ ನಡೆಯದಂತೆ KEA ಕಠಿಣ ಕ್ರಮ ಕೈಗೊಂಡಿದೆ.

402 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಲಿಖಿತ ಲಿಖಿತ ಪರೀಕ್ಷೆ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಒಟ್ಟು 163 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಸಲಾಗಿದೆ.

ಈ ಹಿಂದೆ ಸೆ.22ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆ ದಿನಾಂಕದಂದೇ ಯುಪಿಎಸ್ಸಿ ಮುಖ್ಯ ಪರೀಕ್ಷೆ ಇದ್ದ ಕಾರಣ ಈ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇದೀಗ ಇಂದು ಪರೀಕ್ಷೆ ನಡೆಯುತ್ತಿದ್ದು, ಒಟ್ಟು 66,990 ಮಂದಿ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅರ್ಹರಾಗಿದ್ದು, ಅದರಲ್ಲಿ ಬೆಂಗಳೂರಿನಲ್ಲೇ ಅತಿ ಹೆಚ್ಚು ಅಂದರೆ 21,875 ಮಂದಿ ಪರೀಕ್ಷೆ ಬರೆಯಲಿದ್ದಾರೆ.