Bengaluru 22°C
Ad

ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ : ರಿಸಲ್ಟ್‌ ಹೀಗೆ ನೋಡಿ

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಅನ್ನು ನಡೆಸಿತ್ತು. ಇಂದು (ಮಂಗಳವಾರ – ಮೇ 21) ರಂದು ಫಲಿತಾಂಶವನ್ನು ಪ್ರಕಟ  ಮಾಡುವುದಾಗಿ ಹೇಳಿದೆ.

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಅನ್ನು ನಡೆಸಿತ್ತು. ಇಂದು (ಮಂಗಳವಾರ – ಮೇ 21) ರಂದು ಫಲಿತಾಂಶವನ್ನು ಪ್ರಕಟ  ಮಾಡುವುದಾಗಿ ಹೇಳಿದೆ.

ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ  ವೆಬ್‌ಸೈಟ್‌ ಮೇಲೆ ಕ್ಲಿಕ್‌ ಮಾಡಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಅಲ್ಲದೆ, ಮಂಗಳವಾರವೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ನಿಮ್ಮ ಫಲಿತಾಂಶವನ್ನು ನೋಡುವುದು ಹೇಗೆ?

ದ್ವಿತೀಯ PUC ಫಲಿತಾಂಶಗಳು karresults.nic.in ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು:

  • karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.
    ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು ಒದಗಿಸಿ; ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ (ವಿಜ್ಞಾನ/ಕಲೆ/ವಾಣಿಜ್ಯ)
    ನಿಮ್ಮ 2ನೇ ಪಿಯುಸಿ ಫಲಿತಾಂಶವನ್ನು ಮುಂದಿನ ಪುಟದಲ್ಲಿ ಪರಿಶೀಲಿಸಿ.
Ad
Ad
Nk Channel Final 21 09 2023
Ad