ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026 ಏಪ್ರಿಲ್ 9ರಂದು ಸಂಜೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.
7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಅಧಿಕೃತ ವೆಬ್‌ಸೈಟ್‌ನಲ್ಲಿ ತಮ್ಮ ನೋಂದಣಿ ಸಂಖ್ಯೆ ಬಳಸಿ ಫಲಿತಾಂಶವನ್ನು ಪರಿಶೀಲಿಸಬಹುದು. ಮರುಮೌಲ್ಯಮಾಪನ ಮತ್ತು ಸ್ಕ್ಯಾನ್ಡ್ ಪ್ರತಿಗಳಿಗೆ ಅರ್ಜಿ ಸಲ್ಲಿಸುವ ಅವಕಾಶವೂ ಇರುತ್ತದೆ.

