ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕ್ಲಾಸ್ ಶುರು ಮಾಡಲು ತಯಾರಿ ನಡೆದಿದೆ. How to Make English Easy ಎಂಬ ಪರಿಕ್ಪನೆಯೊಂದಿಗೆ ಈ ಯೋಜನೆಯನ್ನು ರೂಪಿಸುವಂತೆ ಶಾಲಾ ಶಿಕ್ಷಕರಿಗೆ ನಿರ್ದೇಶನ ನೀಡಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2024-25ರ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿಗಳನ್ನು ಪರಿಚಯಿಸಲಿದೆ. 40 ನಿಮಿಷಗಳ ಸ್ಪೋಕನ್ ಇಂಗ್ಲಿಷ್ ತರಗತಿಯನ್ನು ಪ್ರತಿ ಶನಿವಾರ ನಡೆಸಲು ಸಿದ್ಧತೆ ನಡೆದಿದೆ.

2024-25ರ ಶೈಕ್ಷಣಿಕ ವರ್ಷದಿಂದ ಸ್ಪೋಕನ್ ಕ್ಲಾಸ್ ಶುರುವಾಗಲಿದೆ. ಸರ್ಕಾರಿ ಶಾಲೆಗಳಲ್ಲಿರುವ ಇಂಗ್ಲಿಷ್ ಶಿಕ್ಷಕರಿಂದ ಸ್ಪೋಕನ್ ಇಂಗ್ಲಿಷ್ ಪಾಠ ಮಾಡಲಾಗುತ್ತದೆ. ಈ ಬಗ್ಗೆ ವಿಶೇಷ ತರಬೇತಿಯನ್ನು ನೀಡಲಾಗಿದ್ದು, ಮಕ್ಕಳಿಗೆ ಸ್ಪೋಕನ್ ಇಂಗ್ಲೀಷ್ ತರಗತಿ ಶುರು ಮಾಡಲಾಗುತ್ತದೆ.

ಪ್ರತಿ ಶನಿವಾರದ 3ನೇ ತರಗತಿಯನ್ನು ಸ್ಪೋಕನ್ ಇಂಗ್ಲಿಷ್‌ಗೆ ಮೀಸಲಿಡಲಾಗುತ್ತದೆ. ಸುಮಾರು 40 ನಿಮಿಷದ ಅವಧಿಯಲ್ಲಿ ಮಕ್ಕಳು ಇಂಗ್ಲಿಷ್‌ನಲ್ಲಿ ಮಾತ್ರ ಮಾತನಾಡಬೇಕು. ಈ ಮೂಲಕ ವಿದ್ಯಾರ್ಥಿಗಳು, ಸಹಜವಾಗಿ ಇಂಗ್ಲಿಷ್ ಕಲಿಯಲು ಪೂರಕ ವಾತಾವರಣವನ್ನು ಸೃಷ್ಟಿಸಬೇಕೆಂಬ ಸೂಚನೆ ನೀಡಲಾಗಿದೆ.

ಶಾಲೆಯಲ್ಲಿ ವಿದ್ಯಾರ್ಥಿಗಳ ತಂಡವೊಂದು ರಚಿಸಲಾಗುತ್ತದೆ. ಸಂಭಾಷೆ, ನಾಟಕ, ಕಥೆ ಹೇಳುವುದು, ಅನುಭವಗಳನ್ನು ಹಂಚಿಕೆಕೊಳ್ಳುವುದೆಲ್ಲವೂ ಸ್ಪೋಕನ್‌ ಇಂಗ್ಲಿಷ್‌ ಕ್ಲಾಸ್‌ನಲ್ಲಿ ಇರಲಿದೆ. ಶಾಲಾ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳಿಂದಲೇ ಇಂಗ್ಲಿಷ್‌ನಲ್ಲಿ ನಿರೂಪಣೆ ಮಾಡಿಸಲಾಗುತ್ತದೆ.

ಇಂಗ್ಲಿಷ್‌ನಲ್ಲಿ ನಿರ್ವಹಣೆ ಮಾಡುವುದು ಹೇಗೆ ಎಂದು ತಿಳಿಸಿಕೊಡಲಾಗುತ್ತದೆ. ಎಲ್‌ಕೆಜಿಯಿಂದ ನಲಿ-ಕಲಿ ತರಗತಿಗಳಿಗೆ ವಿವಿಧ ರೀತಿಯ ಚಾರ್ಟ್ ರಚಿಸುವುದು. ಮಾನವನ ಶರೀರದ ಭಾಗಗಳು, ಹಣ್ಣು- ತರಕಾರಿಗಳು, ಬಣ್ಣಗಳು, ವಾಹನಗಳು ಸೇರಿ ಇತರೆ ಚಿತ್ರ/ಭಾಗಗಳನ್ನು ಗುರುತಿಸಿ ದಾಖಲಿಸಲಾಗುತ್ತದೆ.