ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2024ರ ಎಸ್ಎಸ್ಎಲ್ಸಿ (SSLC) ಪರೀಕ್ಷೆ-02 ಫಲಿತಾಂಶವನ್ನು ಇಂದು (ಜು.01) ಬೆಳಗ್ಗೆ 11:30ಕ್ಕೆ ಬಿಡುಗಡೆ ಮಾಡಲಿದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಕೆಎಸ್ಆರ್ಇಬಿಯ ಅಧಿಕೃತ ವೆಬ್ ಸೈಟ್ https://karresults.nic.in ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ವಿದ್ಯಾರ್ಥಿಗಳು ಫಲಿತಾಂಶವನ್ನು ಪರಿಶೀಲಿಸಲು ಮತ್ತು ಫಲಿತಾಂಶ ಪಟ್ಟಿ ಡೌನ್ಲೋಡ್ ಮಾಡಲು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಕೆಎಸ್ಇಎಬಿ ಅಧಿಕೃತ ವೆಬ್ಸೈಟ್ kseab.karnataka.gov.in ಅಥವಾ karresults.nic.inಗೆ ಭೇಟಿ ನೀಡಿ.
ರಾಜ್ಯದ 724 ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 14 ರಿಂದ 21ರವರಗೆ ಎಸ್ಎಸ್ಎಲ್ಸಿ ಪರೀಕ್ಷೆ-02 ನಡೆದವು. ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು.
ಫಲಿತಾಂಶ ಪರಿಶೀಲಿಸುವುದು ಹೇಗೆ
ಹಂತ 1: kseab.karnataka.gov.in ಅಥವಾ karresults.nic.inನಲ್ಲಿ ಕೆಎಸ್ಇಎಬಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
ಹಂತ 2: ಮುಖಪುಟದಲ್ಲಿ ಕರ್ನಾಟಕ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಲಿಂಕ್ ಅನ್ನು ಕ್ಲಿಕ್ ಮಾಡಿ.
ಹಂತ 3: ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
ಹಂತ 4: Submit ಬಟನ್ ಮೇಲೆ ಕ್ಲಿಕ್ ಮಾಡಿ
ಹಂತ 5: ನಿಮ್ಮ ಫಲಿತಾಂಶ ಪರದೆಯ ಮೇಲೆ ಕಾಣುತ್ತದೆ.
ಹಂತ 6: ಕರ್ನಾಟಕ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಡೌನ್ಲೋಡ್ ಮಾಡಿ ಮತ್ತು ಪ್ರಿಂಟ್ಔಟ್ ಅನ್ನು ತೆಗೆದುಕೊಳ್ಳಿ

