Ad

ಎಸ್‌ಎಸ್ಎ‌ಲ್‌ಸಿ ಪರೀಕ್ಷೆ-2 ಫಲಿತಾಂಶ ಇಂದು ಪ್ರಕಟ: ರಿಸಲ್ಟ್​ ಹೀಗೆ ನೋಡಿ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2024ರ ಎಸ್​​ಎಸ್​ಎಲ್​​ಸಿ (SSLC) ಪರೀಕ್ಷೆ-02 ಫಲಿತಾಂಶವನ್ನು ಇಂದು (ಜು.01) ಬೆಳಗ್ಗೆ 11:30ಕ್ಕೆ ಬಿಡುಗಡೆ ಮಾಡಲಿದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಕೆಎಸ್​ಆರ್​ಇಬಿಯ ಅಧಿಕೃತ ವೆಬ್​ ಸೈಟ್​​ https://karresults.nic.in ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2024ರ ಎಸ್​​ಎಸ್​ಎಲ್​​ಸಿ (SSLC) ಪರೀಕ್ಷೆ-02 ಫಲಿತಾಂಶವನ್ನು ಇಂದು (ಜು.01) ಬೆಳಗ್ಗೆ 11:30ಕ್ಕೆ ಬಿಡುಗಡೆ ಮಾಡಲಿದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಕೆಎಸ್​ಆರ್​ಇಬಿಯ ಅಧಿಕೃತ ವೆಬ್​ ಸೈಟ್​​ https://karresults.nic.in ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

Ad
300x250 2

ವಿದ್ಯಾರ್ಥಿಗಳು ಫಲಿತಾಂಶವನ್ನು ಪರಿಶೀಲಿಸಲು ಮತ್ತು ಫಲಿತಾಂಶ ಪಟ್ಟಿ ಡೌನ್​ಲೋಡ್​ ಮಾಡಲು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಕೆಎಸ್​ಇಎಬಿ ಅಧಿಕೃತ ವೆಬ್​​ಸೈಟ್​ kseab.karnataka.gov.in ಅಥವಾ karresults.nic.inಗೆ ಭೇಟಿ ನೀಡಿ.

ರಾಜ್ಯದ 724 ಪರೀಕ್ಷಾ ಕೇಂದ್ರಗಳಲ್ಲಿ ಜೂನ್​ 14 ರಿಂದ 21ರವರಗೆ ಎಸ್​ಎಸ್​ಎಲ್​ಸಿ ಪರೀಕ್ಷೆ-02 ನಡೆದವು. ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು.

ಫಲಿತಾಂಶ ಪರಿಶೀಲಿಸುವುದು ಹೇಗೆ
ಹಂತ 1: kseab.karnataka.gov.in ಅಥವಾ karresults.nic.inನಲ್ಲಿ ಕೆಎಸ್​ಇಎಬಿ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ.
ಹಂತ 2: ಮುಖಪುಟದಲ್ಲಿ ಕರ್ನಾಟಕ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ಲಿಂಕ್​ ಅನ್ನು ಕ್ಲಿಕ್​ ಮಾಡಿ.
ಹಂತ 3: ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
ಹಂತ 4: Submit ಬಟನ್​ ಮೇಲೆ ಕ್ಲಿಕ್​ ಮಾಡಿ
ಹಂತ 5: ನಿಮ್ಮ ಫಲಿತಾಂಶ ಪರದೆಯ ಮೇಲೆ ಕಾಣುತ್ತದೆ.
ಹಂತ 6: ಕರ್ನಾಟಕ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಡೌನ್​ಲೋಡ್​ ಮಾಡಿ ಮತ್ತು ಪ್ರಿಂಟ್​ಔಟ್​ ಅನ್ನು ತೆಗೆದುಕೊಳ್ಳಿ

Ad
Ad
Nk Channel Final 21 09 2023
Ad