ಬೆಂಗಳೂರು: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ.
ಈ ವರ್ಷ ಸುಮಾರು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು, ಅದರಲ್ಲಿ 8.5 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಕಳೆದ ವರ್ಷ (2025) ರಾಜ್ಯದ ಒಟ್ಟಾರೆ ಉತ್ತೀರ್ಣ ಪ್ರಮಾಣ ಶೇ. 66.14 ರಷ್ಟಿತ್ತು.
ಅಧಿಕೃತ ವೆಬ್‌ಸೈಟ್ ವಿವರ
ವಿದ್ಯಾರ್ಥಿಗಳು karresults.nic.in ಅಥವಾ kseab.karnataka.gov.in ಪೋರ್ಟಲ್‌ಗೆ ಭೇಟಿ ನೀಡಿ ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ಫಲಿತಾಂಶ ವೀಕ್ಷಿಸಬಹುದು.

