ಬೆಂಗಳೂರು : ಆಗಸ್ಟ್‌ 2ರಿಂದ 9 ವೆರಗೂ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ರ ಸರು ನೋಂದಾಯಿಸಿದ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದ್ದು, ಕೂಡಲೇ ಪಡೆದುಕೊಳ್ಳುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆದೇಶ ಹೊರಡಿಸಿದೆ.

2022-23ನೇ ಸಾಲಿನಲ್ಲಿಯೂ ಅನುತ್ತೀರ್ಣರಾದ, 2023-24ನೇ ಸಾಲಿನ ಮೊದಲ ಹಾಗೂ ದ್ವಿತೀಯ ಪರೀಕ್ಷೆಗೆ ಗೈರಾದವರು, ತೇರ್ಗಡೆ ಹೊಂದಲು ಸಾಧ್ಯವಾಗದವರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಇನ್ನು, ಕಳೆದ ಪರೀಕ್ಷೆಗಳಲ್ಲಿ ಪಡೆದ ಅಂಕಗಳಿಂದ ಸಮಾಧಾನಗೊಳ್ಳದವರು, ಇನ್ನೂ ಹೆಚ್ಚಿನ ಅಂಕ ಪಡೆಯಬೇಕು ಎನ್ನುವವರು ಕೂಡ ಮೂರನೇ ಪರೀಕ್ಷೆ ಬರೆಯಲಿದ್ದಾರೆ

ಪ್ರಕಟಣೆಯಲ್ಲಿ ಏನಿದೆ?
ಶಾಲಾ ಮುಖ್ಯೋಪಾಧ್ಯಾಯರು ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸಬೇಕು. ಒಂದು ವೇಳೆ ಏನಾದರೂ ಸಮಸ್ಯೆ ಕಂಡುಬಂದಲ್ಲಿ ಕೂಡಲೇ ಸಂಬಂಧಿಸಿದ ಪರಿಶೀಲನಾ ಶಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಮ್ಮ ಶಾಲೆಯ ಮುಖಾಂತರ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಡೌನ್‌ಲೋಡ್ ಮಾಡಿಕೊಂಡ ಪ್ರವೇಶ ಪತ್ರಗಳ ಸಂಖ್ಯೆ ಸರಿ ಹೊಂದುತ್ತಿವೆಯೇ ಎಂದು ತಪ್ಪದೇ ಪರಿಶೀಲಿಸಬೇಕು. ಒಂದು ವೇಳೆ ಯಾವುದಾದರು ವಿದ್ಯಾರ್ಥಿಯ ಪ್ರವೇಶ ಪತ್ರ ಬಂದಿಲ್ಲದಿದ್ದರೆ ಆ ವಿವರವನ್ನು ದಾಖಲೆಗಳೊಂದಿಗೆ ಮಂಡಳಿಗೆ ಕೂಡಲೇ ಕಳುಹಿಸಬೇಕು ಎಂದು ಸೂಚಿಸಲಾಗಿದೆ.

240720241025.pdf

ಇದನ್ನು ಗಮನಿಸಿ
ಪ್ರವೇಶ ಪತ್ರದಲ್ಲಿ ಹಾಗೂ ಕೇಂದ್ರ ನಾಮಯಾದಿಪಟ್ಟಿಯಲ್ಲಿ ಭಾವಚಿತ್ರ ಇಲ್ಲದೇ ಇರುವ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅನುಮತಿ ನೀಡುವುದಿಲ್ಲ. ಇದಕ್ಕೆ ಮಂಡಳಿ ಜವಾಬ್ದಾರಿಯಲ್ಲ. ಹೀಗಾಗಿ ಪ್ರವೇಶ ಪತ್ರದಲ್ಲಿ ವಿದ್ಯಾರ್ತಿಯ ಫೋಟೊ ಇದೆ ಎನ್ನುವುದನ್ನು ಖಚಿತಪಡಿಸಿ. ಇಲ್ಲದಿದ್ದರೆ ಈಗಲೇ ಮಂಡಳಿಯ ಗಮನಕ್ಕೆ ತನ್ನಿ.
ಶಾಲಾ ಲಾಗಿನ್‌ನಿಂದ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿ ಕೂಡಲೇ ವಿತರಿಸಬೇಕು ಮತ್ತು ಹಾಗೂ ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಸೂಚನೆಗಳನ್ನು ತಪ್ಪದೇ ಪಾಲಿಸಲುತಿಳಿಸಬೇಕು.
ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪಾಸಾದ ವಿಷಯಕ್ಕೆ ಪರೀಕ್ಷೆ ಬರೆಯುವಂತೆ ಮುದ್ರಣವಾಗಿದ್ದಲ್ಲಿ ಪಾಸಾದ ಬಗ್ಗೆ ಚುಕ್ಕೆ ಗುರುತಿಲ್ಲದ ಫಲಿತಾಂಶ ಪಟ್ಟಿಯನ್ನು ಮುಖ್ಯಶಿಕ್ಷಕರು ದೃಢೀಕರಿಸಿ ಪರೀಕ್ಷೆ ಪ್ರಾರಂಭವಾಗುವುದಕ್ಕೆ ಮುಂಚಿತವಾಗಿ ಪರಿಶೀಲನಾ ಶಾಖೆಯ ಅಧಿಕಾರಿಗಳಿಗೆ ಕಳುಹಿಸಬೇಕು.
ಪ್ರವೇಶ ಪತ್ರವನ್ನು ಪಡೆಯಲು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು