ಮಂಗಳೂರು : ಶಕ್ತಿನಗರದಲ್ಲಿರುವ ವಿಶೇಷಚೇತನ ಹಾಗೂ ಬುದ್ಧಿಮಾಂದ್ಯ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ತರಬೇತಿ ಕೇಂದ್ರ ‘ಸಾನಿಧ್ಯ’ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಸಂತೋಷ್ ಕುಮಾರ್ ಶೆಟ್ಟಿ ಭಾಗವಹಿಸಿ, ಶಿಕ್ಷಕರಿಗೆ ಶುಭಾಶಯಗಳನ್ನು ಸಲ್ಲಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮಕ್ಕಳಿಗೆ ಜ್ಞಾನ ಹಾಗೂ ಮೌಲ್ಯಗಳನ್ನು ನೀಡುವ ಮೂಲಕ ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರು ಮಹತ್ವದ ಪಾತ್ರ ವಹಿಸುತ್ತಾರೆ. ಶಿಕ್ಷಕರ ಸೇವೆ ಹಾಗೂ ಸಮರ್ಪಣೆಯನ್ನು ಸದಾ ಗೌರವಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂತೋಷ್ ಕುಮಾರ್ ಶೆಟ್ಟಿ ಅವರನ್ನು ಸಾನಿಧ್ಯ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಾನಿಧ್ಯ ಸಂಸ್ಥೆಯ ವಸಂತ್ ಕುಮಾರ್ ಶೆಟ್ಟಿ, ಮಹಾಬಲ ಮಾರ್ಲ, ಜಗದೀಶ್ ಶೆಟ್ಟಿ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

