ಬೆಂಗಳೂರು: ಏ.22, 23, 24ರಂದು ನಡೆದಿದ್ದ 2026ರ UG CET ಪರೀಕ್ಷೆಯ ಫಲಿತಾಂಶ ನಾಳೆ (ಜೂ.6) ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.

ನಾಳೆ ಬೆಳಿಗ್ಗೆ 12 ಗಂಟೆಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣು ಪ್ರಕಾಶ್ ಪಾಟೀಲ್ ಅವರು ಸುದ್ದಿಗೋಷ್ಠಿ ನಡೆಸಲಿದ್ದು, ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

https://keaonline.karnataka.gov.in/ugcet_2026_results, https://keaonline.karnataka.gov.in/ugcet_2026_result ಹಾಗೂ https://cetonline.karnataka.gov.in/kea ಈ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.