Bengaluru 22°C
Ad

ಯುಜಿಸಿ ನೆಟ್‌ ಪರೀಕ್ಷೆ ರದ್ದು : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ

ಜೂನ್‌ 18 ರಂದು ನಡೆದಿದ್ದ ಯುಜಿಸಿ ನೆಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಸಾದ್ಯತೆ ಇರುವುದರಿಂದ ಅದನ್ನು ರದ್ಧುಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವಾಲಯ ಗುರುವಾರ ತಳಿಸಿದೆ.

ನವದೆಹಲಿ : ಜೂನ್‌ 18 ರಂದು ನಡೆದಿದ್ದ ಯುಜಿಸಿ ನೆಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಸಾದ್ಯತೆ ಇರುವುದರಿಂದ ಅದನ್ನು ರದ್ಧುಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವಾಲಯ ಗುರುವಾರ ತಳಿಸಿದೆ.

Ad
300x250 2

ಈ ಪರೀಕ್ಷೆಯಲ್ಲಿ9 ವಿದ್ಯಾರ್ಥಿಗಳು ಭಾಗವಹಿಸಿದ್ದರು, ಈ ನಡುವೆ ಪರೀಕ್ಷೆಯ ಪಾರದರ್ಶಕತೆಗೆ ಧಕಗಕೆಯುಂಟಾಗಿರಬಹುದೆಂಬ ಮಾಹಿತಿ ಲಬಿಸಿರುವ ಕಾರಣ ಪರೀಕ್ಷೆಯನ್ನು ರದ್ದುಗೊಳಿಸಲು ಸಚಿವಾಲಯ ನಿರ್ಧರಿಸಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸಲಾಗುವುದು. ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ ಎಂದು ಶಿಕ್ಷಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಗೋವಿಂದ್‌ ಜೈಸ್ವಾಲ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪರೀಕ್ಷೆಯ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ ಆದರೆ ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಅವರ ಬಳಿ ಲಭ್ಯವಿರುವ ಆಧಾರದ ಮೇಲೆ ಸ್ವಯಂ ಪ್ರೇರಿತ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

Ad
Ad
Nk Channel Final 21 09 2023
Ad