Bengaluru 22°C
Ad

ಯುಜಿಸಿ ನೆಟ್‌ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ: ಕಂಪ್ಯೂಟರ್‌ ಆಧಾರಿತ ಪರೀಕ್ಷೆಗೆ ತೀರ್ಮಾನ

ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ರದ್ದಾಗಿದ್ದ ಯುಜಿಸಿ ನೆಟ್‌ ಪರೀಕ್ಷೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಹೊಸ ದಿನಾಂಕವನ್ನು ಘೋಷಣೆ ಮಾಡಿದ್ದು, ಆಗಸ್ಟ್‌ 21 ಹಾಗೂ ಸೆಪ್ಟೆಂಬರ್‌ 4ರಂದು ನಡೆಯಲಿದೆ.

ನವದೆಹಲಿ: ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ರದ್ದಾಗಿದ್ದ ಯುಜಿಸಿ ನೆಟ್‌ ಪರೀಕ್ಷೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಹೊಸ ದಿನಾಂಕವನ್ನು ಘೋಷಣೆ ಮಾಡಿದ್ದು, ಆಗಸ್ಟ್‌ 21 ಹಾಗೂ ಸೆಪ್ಟೆಂಬರ್‌ 4ರಂದು ನಡೆಯಲಿದೆ.

Ad
300x250 2

ಪರೀಕ್ಷೆಯಲ್ಲಿ ಅಕ್ರಮ ತಡೆಯುವ ದಿಸೆಯಲ್ಲಿ ಪೆನ್‌ ಹಾಗೂ ಪೇಪರ್‌ ಪದ್ಧತಿ ಬದಲಾಗಿ, ಕಂಪ್ಯೂಟರ್‌ ಆಧಾರಿತವಾಗಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಇದರ ಬೆನ್ನಲ್ಲೇ, ಆಲ್‌ ಇಂಡಿಯಾ ಆಉಷ್‌ ಪೋಸ್ಟ್‌ ಗ್ರ್ಯಾಜುಯೇಟ್‌ ಪ್ರವೇಶ ಪರೀಕ್ಷೆಯು ಜುಲೈ 6ರಂದು ನಡೆಸಲು ತೀರ್ಮಾನಿಸಲಾಗಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸಿದ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ-ನೆಟ್‌ 2024 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾರಣಕ್ಕಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿತ್ತು.

ನ್ಯಾಷನಲ್ ಸೈಬರ್‌ ಕ್ರೈಮ್‌ ಥ್ರೆಟ್‌ ಅನಾಲಿಟಿಕ್ಸ್‌ ಯುನಿಟ್‌ ಆಫ್‌ ಇಂಡಿಯನ್‌ ಸೈಬರ್‌ ಕ್ರೈಮ್‌ ಕೋ-ಆರ್ಡಿನೇಷನ್‌ ಸೆಂಟರ್‌ನಿಂದ ಯುಜಿಸಿಗೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು.

ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪಿಎಚ್‌.ಡಿ ಪ್ರವೇಶಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ ಬದಲು ಅಭ್ಯರ್ಥಿಯು ನೆಟ್‌ನಲ್ಲಿ ಗಳಿಸಿದ ಅಂಕಗಳನ್ನು ಪರಿಗಣಿಸಲು ಯುಜಿಸಿಯು ಈಗಾಗಲೇ ಅನುಮೋದನೆ ನೀಡಿದೆ. ಹಾಗಾಗಿ, ಅಭ್ಯರ್ಥಿಗಳಿಗೆ ನೆಟ್‌ ಪ್ರಮುಖ ಸಂಗತಿಯಾಗಿದೆ.

ದೇಶದ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಜ್ಯೂನಿಯರ್‌ ರಿಸರ್ಚ್‌ ಫೆಲೋಶಿಪ್‌ ಪಡೆಯಲು ಹಾಗೂ ಉಪನ್ಯಾಸಕರಾಗಿ ಅಥವಾ ಸಹಾಯ ಪ್ರಾಧ್ಯಾಪಕರಾಗಿ ಆಯ್ಕೆಯಾಗಲು ಅರ್ಹತೆ ಪಡೆಯಬೇಕಾದರೆ ಜಂಟಿ ಸಿಎಸ್‌ಐಆರ್‌ ಯುಜಿಸಿ ನೆಟ್‌ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೇಕು. ಜೂನ್‌ 25 ಹಾಗೂ ಜೂನ್‌ 27ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು. ಈ ಪರೀಕ್ಷೆಯನ್ನು ಜುಲೈ 25-27ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.

Ad
Ad
Nk Channel Final 21 09 2023
Ad