ಬೆಂಗಳೂರು: ಯುಜಿಸಿಇಟಿ 2024ರ ಮೊದಲ ಅಣಕು ಸೀಟು ಹಂಚಿಕೆಯ ಫಲಿತಾಂಶವನ್ನು ಆಗಸ್ಟ್ 9ರ ಸಂಜೆ 6ಗಂಟೆ ನಂತರ ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಈ ಕುರಿತು ಕೆಇಎ ಟ್ವೀಟ್ ಮೂಲಕ ತಿಳಿಸಿದೆ.
ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ತಮ್ಮ ಆಸಕ್ತಿಗನುಗುಣವಾಗಿ ಆಪ್ಷನ್ ದಾಖಲಿಸಿರುವ ಸಿಇಟಿ ರ‍್ಯಾಂಕಿಂಗ್ ಅಭ್ಯರ್ಥಿಗಳಿಗೆ ಇಂದು ಸಂಜೆ 6 ಗಂಟೆಗೆ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟಗೊಳ್ಳಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಕುರಿತು ಅಪ್‌ಡೇಟ್ ನೀಡಲಿದೆ.
ಅಭ್ಯರ್ಥಿಗಳಿಗೆ ತಮ್ಮ ಆಪ್ಷನ್ ದಾಖಲಿಸಲು ಆಗಸ್ಟ್ 4 ಕೊನೆಯ ದಿನವಾಗಿತ್ತು. ಇಂಜಿನಿಯರಿಂಗ್, ಯೋಗ, ನ್ಯಾಚುರೋಪಥಿ, ಪಶುವೈದ್ಯ, ನರ್ಸಿಂಗ್, ಕೃಷಿ ವಿಜ್ಞಾನ, ಬಿ -ಫಾರ್ಮಾ ಮತ್ತು ಡಿ-ಫಾರ್ಮಾ ಕೋರ್ಸ್ ಮತ್ತು ಕಾಲೇಜುಗಳ ಆಯ್ಕೆ ಆಪ್ಷನ್ ಮೂಲಕ ನಡೆದಿದೆ. ಇಂದು ಅಣಕು ಸೀಟು ಹಂಚಿಕೆ ಬಳಿಕ ನೈಜ ಸೀಟು ಹಂಚಿಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಈ ಮೊದಲು ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಏಳು ದಿನ ಅವಕಾಶ ನೀಡಲಾಗಿತ್ತು. ಜು.30ರಂದು ಕೊನೆಯಾಗಲಿದ್ದ ಅದನ್ನು ಅಭ್ಯರ್ಥಿಗಳ ಮನವಿ ಮೇರೆಗೆ ಮತ್ತೂ ವಿಸ್ತರಿಸಲಾಗಿತ್ತು. ಯೋಗ ಮತ್ತು ನ್ಯಾಚುರೋಪತಿ ಕೋರ್ಸುಗಳ ಸೀಟ್ ಮ್ಯಾಟ್ರಿಕ್ಸ್ ಬಂದಿದ್ದು, ಅದಕ್ಕೂ ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿತ್ತು.