ಮಂಗಳೂರು: ಯೆನೆಪೋಯ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜು ಮತ್ತು ಆಸ್ಪತ್ರೆ (YNYSCH), ನರಿಂಗಾನ, ಡೆರಳಕಟ್ಟೆ ಇದರ NSS ಹಾಗೂ YRC ಘಟಕಗಳ ವತಿಯಿಂದ ವಿದ್ಯಾರ್ಥಿಗಳಿಗಾಗಿ ಸ್ವಯಂ ರಕ್ಷಣಾ ತರಬೇತಿ ಕಾರ್ಯಕ್ರಮವನ್ನು ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಸ್ವರಕ್ಷಾ ಫಾರ್ ವುಮೆನ್ ಟ್ರಸ್ಟ್ (R), ಕಟೀಲು, ಮಂಗಳೂರು ಇದರ ಸಂಸ್ಥಾಪಕರಾದ ಶ್ರೀ ಕಾರ್ತಿಕ್ ಎಸ್. ಕಟೀಲ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಮೂಲಭೂತ ಸ್ವಯಂ ರಕ್ಷಣಾ ತಂತ್ರಗಳು ಹಾಗೂ ವೈಯಕ್ತಿಕ ಸುರಕ್ಷತೆಯ ಕುರಿತು ಪ್ರಾಯೋಗಿಕ ತರಬೇತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಪುನೀತ್ ರಾಘವೇಂದ್ರ ಕೆ. ಆರ್. ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು. NSS ಕಾರ್ಯಕ್ರಮಾಧಿಕಾರಿ ಡಾ. ಅಜಿತ್ ಕೆ. ಹಾಗೂ YRC ಕಾರ್ಯಕ್ರಮಾಧಿಕಾರಿ ಡಾ. ಪ್ರಥೀಕ್ಷಾ ಕಾರ್ಯಕ್ರಮವನ್ನು ಸಂಯೋಜಿಸಿದರು.

ವಿದ್ಯಾರ್ಥಿಗಳು ತರಬೇತಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಆಯೋಜಕರು ಕೃತಜ್ಞತೆ ಸಲ್ಲಿಸಿದರು.

