News Karnataka Kannada
Sunday, April 14 2024
Cricket
ಮನರಂಜನೆ

ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದುಕೊಂಡ ಅಮೃತಮತಿ ಚಿತ್ರ

Photo Credit :

ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದುಕೊಂಡ ಅಮೃತಮತಿ ಚಿತ್ರ

ಬೆಂಗಳೂರು : ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ ಅಮೃತಮತಿ ‘ ಚಿತ್ರವು, ಲಾಸ್ ಏಂಜಲಿಸ್ ಸನ್ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ತನದಾಗಿಸಿಕೊಂಡಿದೆ. 

 

ಚಿತ್ರಕಥೆಗೂ ಹಾಗೆಯೇ ನಿರ್ದೇಶಕ ಬರಗೂರು ಅವರಿಗೆ ವೈಯಕ್ತಿಕ ಪ್ರಶಸ್ತಿ ಲಭಿಸಿದೆ .ಕವಿ ಜನ್ನನಿಂದ ರಚಿತವಾದ ಯಶೋಧರ ಚರಿತೆ ಕಾವ್ಯವನ್ನು ಆಧರಿಸಿ ಈ ಚಿತ್ರ ನಿರ್ಮಾಣವಾಗಿರುವ ಈ ಚಿತ್ರ ಇಲ್ಲಿಯವರೆಗೆ ಹತ್ತು ಅಂತರರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿದೆ.  

 

 ಅಮೇರಿಕದ ಅಟ್ಲಾಂಟ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಶ್ರೇಷ್ಠ ವಿದೇಶಿ ಭಾಷಾ ಚಿತ್ರ ಪ್ರಶಸ್ತಿಗೂ ಭಾಜನವಾಗಿತ್ತು .ಮನಸ್ಸು ಮತ್ತು ದೇಹಗಳ ನಡುವೆ ನಡೆಯುವ ತುಮುಲಗಳನ್ನು ಕಟ್ಟಿಕೊಟ್ಟಿರುವ ಈ ಚಿತ್ರದಲ್ಲಿ, ಹರಿಪ್ರಿಯಾ ಅಮೃತಮತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ . 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು