News Karnataka Kannada
Thursday, April 18 2024
Cricket
ಮನರಂಜನೆ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ನಾಗೇಶ್ ಬಾಬ ನಿಧನ

Photo Credit :

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ನಾಗೇಶ್ ಬಾಬ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿಂದಿನ ಹಾಗೂ ಇಂದಿನ ನಡುವಿನ ಕೊಂಡಿಯಂತೆ ಹಿರಿಯ ನಿರ್ದೇಶಕ ನಾಗೇಶ್ ಬಾಬ ಇಂದು ಮುಂಜಾನೆ ನಿಧನರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದರು. 

82 ವರ್ಷದ ನಾಗೇಶ್ ಬಾಬ ಮಂಡ್ಯ ಜಿಲ್ಲೆ ಬೆಳಕವಾಡಿಯಲ್ಲಿ ಜನಿಸಿದ್ದರು. ಬೆಂಗಳೂರಿನಲ್ಲಿ ಬಿಎಸ್ಸಿ ಪದವಿ ಮುಗಿಸಿದ ಅವರು ಚಿತ್ರರಂಗದಲ್ಲಿ ಕೆಲಸ ಮಾಡುವ ಇರಾದೆಯಿಂದ 1956ರಲ್ಲಿ ಮದರಾಸಿಗೆ ತೆರಳುತ್ತಾರೆ. ತದನಂತರ ಪ್ರಾರಂಭವಾದ ಅವರ ದೀರ್ಘಕಾಲದ ಚಿತ್ರರಂಗದ ಜೀವನಾವಧಿಯಲ್ಲಿ ಕನ್ನಡ ಚಿತ್ರರಂಗಕ್ಕಾಗಿ ಅನೇಕ ಕೊಡುಗೆಗಳನ್ನು ನೀಡುತ್ತಾರೆ. ಅಷ್ಟೇ ಅಲ್ಲದೆ ಚಿತ್ರರಂಗದ ಬೆಳವಣಿಗೆಗಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅದರೊಂದಿಗೆ ಹಲವು ವರ್ಷಗಳ ಕಾಲ ಬಾಬ ಅವರು ಮದರಾಸಿನಲ್ಲಿದ್ದ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸೂಪರಿಂಟೆಂಡ್ ಆಗಿ ಕಾರ್ಯನಿರ್ವಹಿಸಿದ್ದರು.

2005 ರಲ್ಲಿ ತಮ್ಮದೇ ನೇತೃತ್ವದಲ್ಲಿ ‘ಪ್ರಗತಿ ‘ ಸ್ಟುಡಿಯೋವನ್ನು ಸ್ಥಾಪಿಸಿ, ಅದರ ಕಾರ್ಯ ಚಟುವಟಿಕೆಗಳಲ್ಲಿ ನಿರತರಾದರು. ಸ್ಟುಡಿಯೋದ ಪ್ರಗತಿಯಕಡೆ ಮುಖಮಾಡಿದ ನಿರ್ದೇಶಕ ನಾಗೇಶ್ ಬಾಬ ಕೆಲವು ವರ್ಷಗಳ ಕಾಲ ಚಿತ್ರರಂಗದಿಂದ ದೂರವುಳಿದಿದ್ದರು.

ಅನ್ನೈತವನ್ನು ಪ್ರತಿಪಾದಿಸಿದ ನಿಸರ್ಗದತ್ತ ಮಹಾರಾಜ್ ಅವರ ಕುರಿತು ನಾಗೇಶ್ ಬಾಬ ಅವರು 2009ರಲ್ಲಿ ತಯಾರಿಸಿದ್ದ 87 ನಿಮಿಷಗಳ ಇಂಗ್ಲಿಷ್ ಸಾಕ್ಷ್ಯಚಿತ್ರ ‘ತತ್ವಮಸಿ – ಯು ಆರ್ ದಟ್’ಯು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಪ್ರದರ್ಶನಗೊಂಡಿದ್ದವು.

 1957ರಲ್ಲಿ ಆರ್‌.ನಾಗೇಂದ್ರರಾವ್ ನಿರ್ದೇಶನದ ‘ ಪ್ರೇಮದ ಪುತ್ರಿ’ದ ಮೂಲಕ ಸಹಾಯಕ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಾಗೇಶ್ ‘ಬೆಟ್ಟದ ಕಳ್ಳ , ‘ ಪ್ರತಿಮಾ ‘ ‘ ಕೋಟಿ ಚೆನ್ನಯ ‘ ‘ ತೂಗುದೀಪ ‘ ಇತರೆ ಚಿತ್ರಗಳಲ್ಲಿ ಹಲವಾರು ಜವಾಬ್ದಾರಿಗಳನ್ನು ಹಾಗೂ ಹುದ್ದೆಗಳನ್ನು ನಿಭಾಯಿಸಿದ್ದರು. 1970 ರಲ್ಲಿ ‘ಅನಿರೀಕ್ಷಿತ ‘ ಸಿನಿಮಾದ ಮೂಲಕ ನಿರ್ಮಾಪಕ ಹಾಗೂ ನಿರ್ದೇಶಕರಾದರು. ಅದರೊಂದಿಗೆ ಕನ್ನಡ ಸಿನಿಮಾ ಸ್ಥಿರಚಿತ್ರ ಛಾಯಾಗ್ರಹಣ ವಿಭಾಗದಲ್ಲಿ ನಾಗೇಶ್ ಬಾಬ ಅವರ ಕೊಡುಗೆ ಸ್ಮರಣೀಯ . ಹೀಗೆ ಹಲವಾರು ರೀತಿಯಾಗಿ ಚಿತ್ರರಂಗಕ್ಕೆ ಕೊಡುಗೆಗಳನ್ನು ನೀಡಿರುವ ನಾಗೇಶ್ ಬಾಬ ಜನರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು