News Karnataka Kannada
Saturday, April 13 2024
Cricket
ಮನರಂಜನೆ

ಡ್ರಗ್ಸ್ ಪ್ರಕರಣ: ರಿಯಾ ಚಕ್ರವರ್ತಿಗೆ ಜಾಮೀನು

Photo Credit :

ಡ್ರಗ್ಸ್ ಪ್ರಕರಣ: ರಿಯಾ ಚಕ್ರವರ್ತಿಗೆ ಜಾಮೀನು

ನವದೆಹಲಿ: ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣದಲ್ಲಿ ನಟಿ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಬುಧವಾರ ಜಾಮೀನು ನೀಡಿದೆ. ಆದರೆ ಆಕೆಯ ಸಹೋದರ ಶೌಮಿಕ್ ಚಕ್ರವರ್ತಿ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ. 

ಜೂನ್ 14 ರಂದು ಸುಶಾಂತ್ ಮುಂಬೈನ ತನ್ನ ಅಪಾರ್ಟ್ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಅವರ ಸಾವಿನ ಪ್ರಕರಣವನ್ನು ಮುಂಬೈ ಪೊಲೀಸರು ಆರಂಭದಲ್ಲಿ ತನಿಖೆ ನಡೆಸಿದ್ದರು. ಸುಶಾಂತ್ ಅವರ ಗೆಳತಿ ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬದ ವಿರುದ್ಧ ನಟನ ತಂದೆ ಕೆ.ಕೆ.ಸಿಂಗ್ ಅವರು ಆರೋಪ ಮಾಡಿದ್ದರು. ಅದರ ಆಧಾರದ ಮೇಲೆ ರಿಯಾ ವಿಚಾರಣೆಗೆ ಕರೆಸಲಾಗಿತ್ತು. ನಂತರ ಆ ಪ್ರಕರಣವು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದೆ ಎಂದು ತಿಳಿದುಬಂದಾಗ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಸೆಪ್ಟೆಂಬರ್‌ನಲ್ಲಿ ಆಕೆಯನ್ನು ಬಂಧಿಸಿತ್ತು.

ವಿಚಾರಣೆ ಹಾಗೂ ವಾದವಿವಾದಗಳ ನಂತರ ರಿಯಾ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ಪಡೆದರು. “ಬಿಡುಗಡೆಯಾದ ನಂತರ ರಿಯಾ 10 ದಿನಗಳ ಕಾಲ ಪೊಲೀಸ್ ಠಾಣೆಯಲ್ಲಿ ತನ್ನ ಅಸ್ತಿತ್ವವನ್ನು ಗುರುತಿಸಬೇಕು, ತನ್ನ ಪಾಸ್‌ಪೋರ್ಟ್ ಠೇವಣಿ ಇಡಬೇಕು, ನ್ಯಾಯಾಲಯದ ಅನುಮತಿಯಿಲ್ಲದೆ ವಿದೇಶಕ್ಕೆ ಪ್ರಯಾಣಿಸಬಾರದು ಮತ್ತು ಗ್ರೇಟರ್ ಮುಂಬೈಯಿಂದ ಹೊರಹೋಗಬೇಕಾದರೆ ತನಿಖಾಧಿಕಾರಿಗೆ ತಿಳಿಸಬೇಕು” ಎಂದು ನ್ಯಾಯಾಲಯ ಸ್ಪಷ್ಟವಾಗಿ ತಿಳಿಸಿದೆ.

ಮುಂಬೈನ ವಿಶೇಷ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ (ಎನ್‌ಡಿಪಿಎಸ್) ನ್ಯಾಯಾಲಯವು ರಿಯಾ ಚಕ್ರವರ್ತಿ ಮತ್ತು ಇತರರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 20 ರವರೆಗೆ ವಿಸ್ತರಿಸಿದೆ. ಅಧಿಕಾರಿಗಳ ಪ್ರಕಾರ, ಪ್ರಕರಣದಲ್ಲಿ ಬಂಧಿಸಲ್ಪಟ್ಟ 14 ಜನರನ್ನು ವಿಶೇಷ ನ್ಯಾಯಾಲಯಕ್ಕೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹಾಜರುಪಡಿಸಲಾಗಿದೆ ಎನ್ನಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು