News Karnataka Kannada
Thursday, April 18 2024
Cricket
ಮನರಂಜನೆ

ಬಹುಭಾಷಾ ನಟಿ ಪೂಜಾ ಹೆಗ್ಡೆಗೆ ಕೊರೋನ ದೃಢ

Photo Credit :

ಬಹುಭಾಷಾ ನಟಿ ಪೂಜಾ ಹೆಗ್ಡೆಗೆ ಕೊರೋನ ದೃಢ

ಹೈದರಾಬಾದ್ : ದೇಶದ ಜನರನ್ನು ಕಾಡುತ್ತಿರುವ ಕೋವಿಡ್ ಮಹಾಮಾರಿ ಚಿತ್ರರಂಗದ ತಾರೆಯರನ್ನು ಇನ್ನಿಲ್ಲದಂತೆ ಬಾಧಿಸುತ್ತಿದೆ. ಚಿತ್ರರಂಗದ ಹಲವು ತಾರೆಯರಲ್ಲಿ ಈಗಾಗಲೇ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಕೆಲವರು ಚಿಕಿತ್ಸೆ ಪಡೆದುಕೊಂಡು ಸಂಪೂರ್ಣ ಗುಣಮುಖರಾಗಿದ್ದರೆ, ಮತ್ತೆ ಕೆಲವರೂ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ನಟಿ ಪೂಜಾ ಹೆಗ್ಡೆ ಅವರಿಗೂ ಕೋವಿಡ್ ಪಾಸಿಟಿವ್ ದೃಢವಾಗಿದೆ.

ಭಾನುವಾರ ತನಗೆ ಕೋವಿಡ್ ಪಾಸಿಟಿವ್ ಬಂದಿರುವ ವಿಚಾರವನ್ನು ಅಭಿಮಾನಿಗಳೊಂದಿಗೆ ಶೇರ್ ಮಾಡಿರುವ ಪೂಜಾ, ‘ಎಲ್ಲರಿಗೂ ನಮಸ್ಕಾರ. ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಎಲ್ಲಾ ಪ್ರೋಟೋಕಾಲ್ಗಳನ್ನು ಅನುಸರಿಸಿ ನಾನು ಕ್ವಾರೆಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರನ್ನೂ ಪರೀಕ್ಷೆ ಮಾಡಿಕೊಳ್ಳಲು ವಿನಂತಿಸುತ್ತೇನೆ.ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಾನು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದೇನೆ. ದಯವಿಟ್ಟು ಮನೆಯಲ್ಲಿಯೇ ಇರಿ, ಸುರಕ್ಷಿತವಾಗಿರಿ’ ಎಂದು ಸೋಷಿಯಲ್ ಮಿಡಿಯಾ ಪೋಸ್ಟ್ ಶೇರ್ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು