News Karnataka Kannada
Saturday, April 13 2024
Cricket
ಮನರಂಜನೆ

ರ‍್ಯಾಪರ್ ಚಂದನ್ ಶೆಟ್ಟಿಗೆ ಮತ್ತೊಂದು ಸಂಕಷ್ಟ

Photo Credit :

ರ‍್ಯಾಪರ್ ಚಂದನ್ ಶೆಟ್ಟಿಗೆ ಮತ್ತೊಂದು ಸಂಕಷ್ಟ

ಮೈಸೂರು: ಕೋಲುಮಂಡೆ ಹಾಡಿನ ಮೂಲಕ ವಿವಾದ ಮೈಮೇಲೆ ಎಳೆದುಕೊಂಡಿರುವ ರ‍್ಯಾಪರ್ ಚಂದನ್ ಶೆಟ್ಟಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.

ಕೋಲುಮಂಡೆ ಹಾಡನ್ನು ವಿಕೃತಗೊಳಿಸಿ ಅಪಮಾನ ಮಾಡಿದ ಆರೋಪದ ಮೇಲೆ ರ‍್ಯಾಪರ್ ಚಂದನ್ ಶೆಟ್ಟಿ ವಿರುದ್ದ ಮೈಸೂರಿನಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಅಂತರಾಷ್ಟ್ರೀಯ ಕಂಸಾಳೆ ಮಹದೇವಯ್ಯ ಕಲಾಸಂಘದಿಂದ ಡಿಸಿಪಿ ಪ್ರಕಾಶ್ ಗೌಡ ಅವರಿಗೆ ದೂರು ಸಲ್ಲಿಕೆಯಾಗಿದೆ. ಕಂಸಾಳೆ ಕಲಾವಿದರಾದ ಕಂಸಾಳೆ ರವಿ ಎಂಬವರು ದೂರು ನೀಡಿದ್ದಾರೆ.

ಇನ್ನು ಕೋಲುಮಂಡೆ ಹಾಡಿಗೆ ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕ್ಷಮೆ ಕೋರಿ ಮರು ಚಿತ್ರೀಕರಣ ಮಾಡುವುದಾಗಿ ಚಂದನ್ ಶೆಟ್ಟಿ ಹೇಳಿದ್ದರು. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಂಸಾಳೆ ಕಲಾವಿದ ಹಾಡನ್ನು ಮರು ಚಿತ್ರೀಕರಣವನ್ನೂ ಮಾಡಬಾರದೆಂದು ಆಗ್ರಹಿಸಿದ್ದಾರೆ. ಈ ಸಂಬಂಧ ಸೆನ್ಸಾರ್ ಮಂಡಳಿಗೂ ದೂರು ನೀಡಲು ಕಂಸಾಳೆ ಕಲಾವಿದರು ನಿರ್ಧರಿಸಿದ್ದಾರೆ.

ರ್ಯಾಪರ್ ಚಂದನ್ ಶೆಟ್ಟಿ ವಿರುದ್ಧ ಈಗಾಗಲೇ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿದೆ. ಬಜರಂಗದಳ ಮುಖಂಡ ತೇಜಸ್ ಗೌಡ ಅವರು ಚಂದನ್ ವಿರುದ್ಧ ದೂರು ದಾಖಲಿಸಿದ್ದು, ದೂರು ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ಎನ್‍ಸಿಆರ್ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು