News Karnataka Kannada
Tuesday, April 23 2024
Cricket
ಮನರಂಜನೆ

ಸುಶಾಂತ್ ಆತ್ಮಹತ್ಯೆ ಪ್ರಕರಣದ ತನಿಖೆ ಸಿಬಿಐಗೆ ವಹಿಸಿ ಆದೇಶಿಸಿದ ಸುಪ್ರೀಂಕೋರ್ಟ್

Photo Credit :

ಸುಶಾಂತ್ ಆತ್ಮಹತ್ಯೆ ಪ್ರಕರಣದ ತನಿಖೆ ಸಿಬಿಐಗೆ ವಹಿಸಿ ಆದೇಶಿಸಿದ ಸುಪ್ರೀಂಕೋರ್ಟ್

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪುತ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿಕೊಡುವಂತೆ ಸುಪ್ರೀಂಕೋರ್ಟ್ ಬುಧವಾರ ತೀರ್ಪು ನೀಡಿದೆ.

ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿಕೊಡಬೇಕು. ಮುಂಬಯಿ ಪೊಲೀಸರು ಈ ಪ್ರಕರಣದಲ್ಲಿ ನಡೆಸಿರುವಂತಹ ತನಿಖೆಯ ಸಾಕ್ಷ್ಯಗಳನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.

ಇದೇ ವೇಳೆ ಬಿಹಾರ ಪೊಲೀಸರು ಸುಶಾಂತ್ ಆತ್ಮಹತ್ಯೆ ಪ್ರಕರಣದಲ್ಲಿ ಗೆಳತಿ ರೆಹಾ ಚಕ್ರವರ್ತಿ ವಿರುದ್ಧ ದಾಖಲಿಸಿರುವ ಎಫ್ ಐಆರ್ ಕೂಡ ಸರಿಯಾಗಿಯೇ ಇದೆ ಎಂದು ಹೇಳಿದೆ.

ಸುಶಾಂತ್ ಜೂನ್ 14ರಂದು ಮುಂಬಯಿಯ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆದರೆ ಇದರ ಬಗ್ಗೆ ಅನುಮಾನಗಳು ಎದ್ದಿವೆ ಮತ್ತು ಸಿಬಿಐಗೆ ತನಿಖೆ ವಹಿಸಬೇಕು ಎಂದು ಒತ್ತಾಯಗಳು ಕೇಳಿಬಂದಿದ್ದವು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು