ಕಲಬುರಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮರುನಾಮಕರಣ ಮಾಡಿರುವುದನ್ನು ಅನುಷ್ಠಾನಗೊಳಿಸಲು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಎಂ ಕೂರ್ಮರಾವ್ ಗುರುವಾರ ಅಧಿಸೂಚನೆ ಹೊರಡಿಸಿದ್ದಾರೆ.
ರಾಜ್ಯ ಸರ್ಕಾರವು 2021ರ ಜುಲೈ 6 ರಂದು ರಸ್ತೆ ಸಾರಿಗೆ ನಿಗಮಗಳ ಅಧಿನಿಯಮ 1950ರ (1950ರ ಕೇಂದ್ರ ಅಧಿನಿಯಮ 64) ಕಲಂ 3 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಮರುನಾಮಕರಣ ಮಾಡಿ ಆದೇಶಿಸಿದೆ ಎಂದು ಅವರು ತಿಳಿಸಿದ್ದಾರೆ.