ಬೆಂಗಳೂರು : ಇಡೀ ಭಾರತೀಯ ಚಿತ್ರರಂಗವೇ ಕಾತರದಿಂದ ಕಾಯುತ್ತಿರುವ ‘ಕೆಜಿಎಫ್: ಚಾಪ್ಟರ್ 2’ (KGF Chapter 2) ಸಿನಿಮಾ 2022ರ ಏಪ್ರಿಲ್ 14ರಂದು ಚಿತ್ರ ಬಿಡುಗಡೆ ಮಾಡಲು ‘ಕೆಜಿಎಫ್ 2’ ತಂಡ ನಿರ್ಧರಿಸಿದೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಳ್ಳಲಾಗಿದೆ.
ನಟ ಯಶ್ , ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಸ್ಮ್ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಅವರು ಚಿತ್ರದ ಬಿಡುಗಡೆ ದಿನಾಂಕವನ್ನು ಟ್ವಿಟರ್ ಮೂಲಕ ಬಹಿರಂಗಪಡಿಸಿದ್ದಾರೆ. ಜೊತೆಗೆ ಹೊಸ ಪೋಸ್ಟರ್ ಹಂಚಿಕೊಂಡು ಅಭಿಮಾನಿಗಳಿಗೆ ಈ ಬ್ರೇಕಿಂಗ್ ನ್ಯೂಸ್ ನೀಡಿದ್ದಾರೆ.
ಬಹುನಿರೀಕ್ಷಿತ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಮುಂದಿನ ವರ್ಷ ಏಪ್ರಿಲ್ 14ಕ್ಕೆ ಚಿತ್ರ ರಿಲೀಸ್ ಆಗಲಿದೆ ಎಂದು ನಟ ಯಶ್, ನಿರ್ದೇಶಕ ಪ್ರಶಾಂತ್ ನೀಲ್ ತಿಳಿಸಿದ್ದಾರೆ.