News Karnataka Kannada
Sunday, April 28 2024
ಮನರಂಜನೆ

ಕೆಜಿಎಫ್ ಚಾಪ್ಟರ್ 2 ವಿಶೇಷ ದಾಖಲೆ: ಒಂದೇ ವಾರದಲ್ಲಿ 800 ಕೋಟಿ ರೂಪಾಯಿ ಕಲೆಕ್ಷನ್‌

Kgf 2
Photo Credit :

ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ , ನಟ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಸಿನಿಮಾ ವಿಶ್ವಾದ್ಯಂತ ಸೌಂಡ್ ಮಾಡುತ್ತಿದೆ. ಭರ್ಜರಿ ಪ್ರದರ್ಶನ ಕಾಣುತ್ತಿದ್ದು ಬಾಕ್ಸ್ ಆಫೀಸ್‌ನಲ್ಲೂ ವಿಶೇಷ ದಾಖಲೆ ಬರೆಯುತ್ತಿದೆ.

ಏಪ್ರಿಲ್ 14ರಂದು 10 ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಸಿನಿಮಾ, ನಿನ್ನೆಗೆ ಒಂದು ವಾರದ ಯಶಸ್ವಿ ಪ್ರದರ್ಶನವಾಗಿದೆ. ಈ ಸಿನಿಮಾ ವಿಶ್ವಾದ್ಯಂತ 800 ಕೋಟಿ ರೂಪಾಯಿ ಕಲೆಕ್ಷನ್‌ ಮಾಡಿದೆ ಎಂದು ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಮಾಹಿತಿ ನೀಡಿದೆ.

ಈ ಹಿಂದೆ ಸಂಸ್ಥೆ ಹೇಳಿದಂತೆ ವಿದೇಶ ಹೊರತುಪಡಿಸಿ ಭಾರತದಲ್ಲೇ ಮೊದಲನೇ ದಿನ 134.5 ಕೋಟಿ, ಎರಡನೇ ದಿನ ಭಾರತದಲ್ಲಿ 240 ಕೋಟಿ ಸಂಪಾದಿಸಿತ್ತು. ನಾಲ್ಕನೇ ದಿನದಲ್ಲಿ ವಿಶ್ವಾದ್ಯಂತ 540 ಕೋಟಿ ಕಲೆಕ್ಷನ್‌ ಮಾಡಿದೆ ಎಂದು ಸಂಸ್ಥೆ ಅಧಿಕೃತವಾಗಿ ಮಾಹಿತಿ ನೀಡಿತ್ತು.

ಈಗ ಎಂಟು ದಿನಕ್ಕೆ ಕೆಜಿಎಫ್ ಚಾಪ್ಟರ್ 2 ಸಿನಿಮಾ ವಿಶ್ವಾದ್ಯಂತ 800 ಕೋಟಿ ಕಲೆಕ್ಷನ್‌ ಮಾಡುವ ಮೂಲಕ ಸಾವಿರ ಕೋಟಿಯ ಗಡಿ ತಲುಪುತ್ತಿದೆ. ದಕ್ಷಿಣ ಭಾರತದಲ್ಲಿ ಒಂದೂವರೆ ಕೋಟಿಗೂ ಅಧಿಕ ಜನ ಒಂದು ವಾರದಲ್ಲಿ ಈ ಸಿನಿಮಾ‌ ನೋಡಿದ್ದಾರೆ.

ಕರ್ನಾಟಕದಲ್ಲಿ 40 ಲಕ್ಷ ಜನ, ತೆಲುಗಿನಲ್ಲಿ 50 ಲಕ್ಷ ಜನ,‌ ತಮಿಳುನಾಡಿನಲ್ಲಿ 30 ಲಕ್ಷ ಜನ, ‌ಕೇರಳದಲ್ಲಿ 25 ಲಕ್ಷ ಜನ ಸಿನಿಮಾ ವೀಕ್ಷಿಸಿದ್ದಾರೆ ಎನ್ನುವ ಮಾಹಿತಿ ದೊರಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು