ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ವಿಚಾರಣೆ ಸಂಬಂಧ ನಟಿ ಸಂಜನಾ ಅವರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಶೋಧಕಾರ್ಯ ನಡೆಸುತ್ತಿದ್ದಾರೆ.
ಸಂಜನಾ ಫ್ಲ್ಯಾಟ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಶೋಧಕಾರ್ಯ ನಡೆಸಿ ಸಂಜನಾ ಅವರ ಮೂರು ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ. ನಂತರ ಅಧಿಕಾರಿಗಳು ವಶಕ್ಕೆ ಪಡೆಯಲಿದ್ದಾರೆ.
ನ್ಯಾಯಾಲಯದ ಅನುಮತಿ ಪಡೆದು ಸಂಜನಾ ಮನೆ ಮೇಲೆ ದಾಳಿ ಮಾಡಲಾಗಿದೆ ಎಂಬುದಾಗಿ ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಅವರು ತಿಳಿಸಿದ್ದಾರೆ.