Categories: ಮನರಂಜನೆ

ನಿರ್ದೇಶಕ ಪಿ.ಎನ್.ಸತ್ಯ ನಿಧನ: ಕಂಬನಿ ಮಿಡಿದ ದರ್ಶನ್

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಿರ್ದೇಶಕ, ನಟ ಪಿ. ಎನ್ ಸತ್ಯ ಅವರು ಶನಿವಾರ ಸಂಜೆ ಸುಮಾರು 7.30ಕ್ಕೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸತ್ಯ ನಿಧನಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಂಬನಿ ಮಿಡಿದಿದ್ದಾರೆ.

ಕಳೆದ ಒಂದು ವರ್ಷದಿಂದ ಸತ್ಯ ಕ್ಯಾನ್ಸರ್ ನಿಂದ ಬಳಲುತ್ತಿದ್ದು ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದರು. ಇಂದು ಸೋದರಿ ಮನೆಯಲ್ಲಿ ಸತ್ಯ ಅಂತಮ ದರ್ಶನ ನಡೆಯಲಿದೆ. ಸತ್ಯ ನಿರ್ದೇಶನದ ಮೆಜೆಸ್ಟಿಕ್ ಸಿನಿಮಾ ದರ್ಶನ್ ಗೆ ಸ್ಯಾಂಡಲ್ ವುಡ್ ನಲ್ಲಿ ಹೊಸ ಇಮೇಜ್ ತಂದು ಕೊಟ್ಟಿತ್ತು. ಸತ್ಯ ಆ ಬಳಿಕ ಡಾನ್, ದಾಸ, ಶಾಸ್ತ್ರಿ, ಗೂಳಿ ಸೇರಿದಮತೆ ಸುಮಾರು 16 ಚಿತ್ರಗಳನ್ನು ನಿರ್ದೇಶನ ಮಾಡಿದ್ದರು.

ಸತ್ಯ ಸಾವಿಗೆ ದರ್ಶನ್ ಕಂಬನಿ ಮಿಡಿದಿದ್ದು ‘ನನ್ನ ಆಪ್ತ ಸ್ನೇಹಿತರಲ್ಲೊಬ್ಬರು, ನನ್ನ ‘ಮೆಜೆಸ್ಟಿಕ್’ ಚಿತ್ರದ ನಿರ್ದೇಶಕರು ಪಿ.ಎನ್ ಸತ್ಯ ಇಂದು ನಮ್ಮಿಂದ ದೈಹಿಕವಾಗಿ ದೂರವಾಗಿದ್ದಾರೆ. ಈ ನಷ್ಟವನ್ನು ಸಹಿಸಿಕೊಳ್ಳುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ. ಸತ್ಯ ರವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಟ್ವೀಟ್ ಮಾಡಿದ್ದಾರೆ.

Desk

Recent Posts

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

22 seconds ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

12 mins ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

25 mins ago

ಲಕ್ನೋ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ 10 ವಿಕೆಟ್​ಗಳ ಭರ್ಜರಿ ಜಯ

ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್‌ ತಂಡ…

1 hour ago

ಇಂದು ಕೊಡಗು,ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…

1 hour ago

ಇಂದಿನ ರಾಶಿ ಫಲ : ಯಾರಿಗೆ ಶುಭ , ಯಾರಿಗೆ ಅಶುಭ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…

1 hour ago