Categories: ಮನರಂಜನೆ

ನೆಟ್ ಫ್ಲಿಕ್ಸ್ ನಲ್ಲಿ ಸೆಪ್ಟಂಬರ್ 22 ರಂದು ‘ಕ್ರೈಂ ಸ್ಟೋರೀಸ್- ಇಂಡಿಯಾ ಡಿಟೆಕ್ಟೀವ್ಸ್’ ವೆಬ್ ಸಿರೀಸ್ ಬಿಡುಗಡೆ

ಡಾಕ್ಯುಮೆಂಟರಿ ಹಾಗೂ ವೆಬ್​ ಸೀರೀಸ್ ಮೂಲಕ ಒಟಿಟಿ ಕ್ಷೇತ್ರದಲ್ಲಿ ವಿಶೇಷ ಪ್ರಯತ್ನಗಳನ್ನು ಮಾಡುತ್ತಿರುವ ನೆಟ್​ಫ್ಲಿಕ್ಸ್, ಇದೀಗ ಹೊಸ ಸರಣಿಯ ಮುಖಾಂತರ ವಿಶೇಷ ಕಥಾ ವಸ್ತುವೊಂದನ್ನು ಪ್ರೇಕ್ಷಕರಿಗೆ ಕಟ್ಟಿಕೊಡಲು ತಯಾರಾಗಿದೆ.

ಬೆಂಗಳೂರಿನ ಅಪರಾಧ ಜಗತ್ತಿನ 4 ವಿಶೇಷ ಪ್ರಕರಣಗಳನ್ನು ತೆರೆಯ ಮೇಲೆ ತರಲು ನೆಟ್​ಫ್ಲಿಕ್ಸ್ ತಯಾರಾಗಿದೆ. ಈ ಸೀರೀಸ್ ನೈಜ ಸಾಕ್ಷ್ಯಚಿತ್ರ ಮಾದರಿಯಲ್ಲಿರಲಿದ್ದು, ನೆಟ್​ ಫ್ಲಿಕ್ಸ್​ನಲ್ಲಿ ಪ್ರಸಾರವಾಗುವ ಭಾರತದ ಮೊದಲ ನೈಜ ಘಟನೆಗಳನ್ನು ಆಧರಿಸಿದ ಕ್ರೈಮ್ ಸೀರೀಸ್ ಇದಾಗಿದೆ. ಈ ಚಿತ್ರಕ್ಕೆ ‘ಕ್ರೈಂ ಸ್ಟೋರೀಸ್: ಇಂಡಿಯಾ ಡಿಟೆಕ್ಟೀವ್ಸ್ ಎಂದು ಹೆಸರಿಡಲಾಗಿದ್ದು, ಸೆಪ್ಟೆಂಬರ್ 22ರಿಂದ ನೆಟ್​ಫ್ಲಿಕ್ಸ್​ನಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ.

ಈ ಸಾಕ್ಷ್ಯಚಿತ್ರವು ಬೆಂಗಳೂರಿನ ಪೊಲೀಸರು ಸಂಕೀರ್ಣ ಪ್ರಕರಣಗಳ ಹಿಂದೆ ಬಿದ್ದು, ಅವನ್ನು ಭೇಧಿಸುವುದನ್ನು ಎಳೆಎಳೆಯಾಗಿ ತೆರೆದಿಡುತ್ತದೆ. ಈ ಸರಣಿಯಲ್ಲಿ ನಾಲ್ಕು ಪ್ರಮುಖ ಪ್ರಕರಣಗಳನ್ನು ಪೊಲೀಸರು ತನಿಖೆ ಮಾಡುವುದನ್ನು ತೋರಿಸಲಾಗಿದೆ. ಸೀರೀಸ್​ನ ಟ್ರೈಲರ್ ಬಿಡುಗಡೆಯಾಗಿದ್ದು, ಕನ್ನಡ ಭಾಷೆಯಲ್ಲಿದೆ. ಇದು ವೀಕ್ಷಕರ ಸಂತಸಕ್ಕೆ ಕಾರಣವಾಗಿದ್ದು, ನೋಡುಗರಿಗೆ ಆಸಕ್ತಿ ಮೂಡಿಸುವಂತಿದೆ. ಮಿನ್ನೋ ಫಿಲ್ಮ್ಸ್ ನಿರ್ಮಿಸಿದ ಈ ಸರಣಿಯನ್ನು ಎನ್. ಅಮಿತ್ ಮತ್ತು ಜ್ಯಾಕ್ ರಾಂಪ್ಲಿಂಗ್ ಜಂಟಿಯಾಗಿ  ನಿರ್ದೇಶಿಸಿದ್ದಾರೆ.

Sneha Gowda

Recent Posts

ಬಿಜೆಪಿ ಮತ್ತೆ ಗೆದ್ದರೆ ವಿಪಕ್ಷಗಳ ನಾಯಕರು ಜೈಲು ಪಾಲಾಗುತ್ತಾರೆ: ಕೇಜ್ರಿವಾಲ್‌

ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ…

51 seconds ago

ದೆಹಲಿಯಲ್ಲಿ ಬಿರುಗಾಳಿ: ಇಬ್ಬರು ಮೃತ್ಯು, 23 ಮಂದಿಗೆ ಗಾಯ

ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

24 mins ago

ಹೆಚ್ಚಿನ ಫೀಸ್ ತೆಗೆದುಕೊಂಡರೆ ಖಾಸಗಿ ಶಾಲೆಗಳ ವಿರುದ್ಧ ಕ್ರಮ : ಬಂಗಾರಪ್ಪ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪೋಷಕರು ತಮ್ಮ ಮಕ್ಕಳಿಗೆ ಮುಂದಿನ ವಿದ್ಯಾಭ್ಯಸದ ಬಗ್ಗೆ ಈಗಾಗಲೇ ಯೋಚಿಸುತ್ತಿದ್ದಾರೆ

32 mins ago

ವಿದ್ಯಾರ್ಥಿನಿಯ ಹತ್ಯೆ ಪ್ರಕರಣ: ಮರದ ಮೇಲೆ ಬಾಲಕಿಯ ರುಂಡ ಪತ್ತೆ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಬಾಲಕಿ ರುಂಡ ಪತ್ತೆಯಾಗಿದೆ

38 mins ago

ಸೆಕೆಂಡ್ ​ಹ್ಯಾಂಡ್ ಕಾರು ವ್ಯಾಪಾರಿ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ  ಸೆಕೆಂಡ್​ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…

55 mins ago

ಹೈಕೋರ್ಟ್ ಅಡ್ವೋಕೇಟ್ ಚೈತ್ರಾ ಬಿ.ಗೌಡ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

55 mins ago