ನಟ ರಕ್ಷಿತ್ ಶೆಟ್ಟಿ, ಸಾನ್ವಿ ಶ್ರೀವಾತ್ಸವ್ ಅಭಿನಯ ಅವನೇ ಶ್ರೀಮನ್ನಾರಾಯಣ ಚಿತ್ರ ಇಂದು ರಾಜದಾದ್ಯಂತ ಬಿಡುಗಡೆಯಾಗಿದೆ.
ರಾಜ್ಯದ ಬಹುತೇಕ ಚಿತ್ರಮಂದಿರಗಳಲ್ಲಿ ಸಿನಿಮಾದ ಟಿಕೆಟ್ ಸೋಲ್ಡ್ ಆಗಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬರೋಬ್ಬರಿ ಮೂರು ವರ್ಷಗಳ ನಂತರ ರಕ್ಷಿತ್ ಶೆಟ್ಟಿ ಅವರು ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.
ಸಚಿನ್ ರವಿ ನಿರ್ದೇಶನದಲ್ಲಿ ಮೂಡಿಬಂದ ಚಿತ್ರಕ್ಕೆ ಪುಸ್ಕರ ಮಲ್ಲಿಕಾರ್ಜುನಯ್ಯ ಬಂಡವಾಳ ಹೂಡಿದ್ದಾರೆ.