Categories: ಮನರಂಜನೆ

‘ಮರಕ್ಕರ್’ ಚಿತ್ರದ ನೂತನ ಟೀಸರ್ ರಿಲೀಸ್

ಮೋಹನ್​ಲಾಲ್ ಸೇರಿದಂತೆ ಹಲವು ಖ್ಯಾತ ಕಲಾವಿದರು ಬಣ್ಣಹಚ್ಚಿರುವ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಚಿತ್ರ ‘ಮರಕ್ಕರ್: ಲಯನ್ ಆಫ್​ ದಿ ಅರೇಬಿಯನ್ ಸೀ’ ಚಿತ್ರದ ನೂತನ ಟೀಸರ್ ಬಿಡುಗಡೆಯಾಗಿದೆ.

ಮೋಹನ್ ಲಾಲ್ ತಮ್ಮ ಟ್ವಿಟರ್ ಖಾತೆಯಲ್ಲಿ ಹೊಸ ಟೀಸರ್​ಅನ್ನು ಹಂಚಿಕೊಂಡಿದ್ದು, ಅದರ ಅದ್ದೂರಿ ದೃಶ್ಯ ವೈಭವಕ್ಕೆ ಅಭಿಮಾನಿಗಳು ಮಾರುಹೋಗಿದ್ದಾರೆ.

ಖ್ಯಾತ ನಿರ್ದೇಶಕ ಪ್ರಿಯದರ್ಶನ್ ನಿರ್ದೇಶಿಸಿರುವ ಈ ಚಿತ್ರ ಡಿಸೆಂಬರ್ 2ರಂದು ದೇಶದೆಲ್ಲೆಡೆ ಬಿಡುಗಡೆಯಾಗಲಿದೆ. ಟೀಸರ್​ನಲ್ಲಿ ಬ್ರಿಟೀಷರ ವಿರುದ್ಧದ ಹೋರಾಟದ ಅದ್ದೂರಿ ದೃಶ್ಯಗಳಿವೆ.

ಈ ಚಿತ್ರ ಕಳೆದ ಮಾರ್ಚ್​ನಲ್ಲಿಯೇ ತೆರೆಗೆ ಬರಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟಿತ್ತು. ನಂತರ ನೇರವಾಗಿ ಒಟಿಟಿಯಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಘೋಷಿಸಲಾಯಿತು.

ಈ ಕುರಿತು ಕೇರಳ ಸರ್ಕಾರದ ಸಚಿವರು ಚಿತ್ರತಂಡದೊಂದಿಗೆ ಮಾತುಕತೆ ನಡೆಸಿದರು. ಅಂತಿಮವಾಗಿ ಚಿತ್ರತಂಡ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಒಪ್ಪಿಕೊಂಡಿತು. ಇದೀಗ ಡಿಸೆಂಬರ್ 2ಕ್ಕೆ ಚಿತ್ರ ತೆರೆಕಾಣಲಿದೆ.

Sneha Gowda

Recent Posts

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

2 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

21 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

31 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

1 hour ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

1 hour ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

1 hour ago