News Karnataka Kannada
Thursday, May 02 2024
ಮನರಂಜನೆ

ಮುಂದಿನ ವರ್ಷ ಏಪ್ರಿಲ್‌ನಲ್ಲಿ ‘ಕೆಜಿಎಫ್: ಚಾಪ್ಟರ್ 2’ ತೆರೆಗೆ

Yash Kgf 2 22082021
Photo Credit :

ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹು ನಿರೀಕ್ಷಿತ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ 2022ರ ಏಪ್ರಿಲ್ 14ರಂದು ಬಿಡುಗಡೆ ಮಾಡಲು ಚಿತ್ರ ತಂಡ ನಿರ್ಧರಿಸಿದೆ. ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.

ಈ ವಿಚಾರವನ್ನು ಸೋಶಿಯಲ್ ಮೀಡಿಯಾ ಮೂಲಕ ನಟ ಯಶ್, ಚಿತ್ರ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಸ್ಮ್’ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಅವರು ಬಹಿರಂಗಪಡಿಸಿದ್ದಾರೆ.

ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರವು ಈ ವರ್ಷದ ಜುಲೈನಲ್ಲಿಯೇ ಬಿಡುಗಡೆಯಾಗಬೇಕಿತ್ತು. ಆದರೆ, ದೇಶದಲ್ಲಿ ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್‌ಡೌನ್ ಘೋಷಿಸಿದ್ದರಿಂದಾಗಿ ಬಹುಕೋಟಿ ಬಜೆಟ್‌ನ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿತ್ತು.

ಚಿತ್ರದಲ್ಲಿ ಬಾಲಿವುಡ್ ನಟ ಸಂಜಯ್ ದತ್, ಪ್ರಕಾಶ್ ರಾಜ್, ಮಾಳವಿಕ ಅವಿನಾಶ್, ಶ್ರೀನಿಧಿ ಶೆಟ್ಟಿ ಮತ್ತು ರವೀನಾ ಟಂಡನ್ ಅವರು ಕಾಣಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು