ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ರಾಜಕಾರಣಿ ಅಂಬರೀಶ್(೬೬) ಅವರು ಹೃದಯಾಘಾತದಿಂದ ಶನಿವಾರ ರಾತ್ರಿ ನಿಧನರಾದರು. ಕಿಡ್ನಿ, ಶ್ವಾಸಕೋಶದ ಸಮಸ್ಯೆ ಮತ್ತು ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಶಾಸಕರಾಗಿ, ಸಂಸದರಾಗಿ ಹಾಗೂ ಕೇಂದ್ರ ಸಚಿವರಾಗಿ ರಾಜಕಾರಣದಲ್ಲಿ ಸೇವೆ ಸಲ್ಲಿಸಿದ್ದರು. ನಾಗರಹಾವು ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಅಂಬರೀಶ್ ೨೦೦ಕ್ಕೂ ಅಧಿಕ ಕನ್ನಡ ಚಿತ್ರಗಳಲ್ಲಿ ನಟಿಸಿದ್ದರು.
ಆಸ್ಪತ್ರೆಗೆ ನಟ ಯಶ್, ಪುನೀತ್ ರಾಜ್ ಕುಮಾರ್, ಸಿಎಂ ಕುಮಾರಸ್ವಾಮಿ, ಸಚಿವರಾದ ಡಿಕೆ ಶಿವಕುಮಾರ್, ಸಚಿವ ಗೃಹ ಸಚಿವ ಕೆ.ಜೆ. ಜಾರ್ಜ್ ಭೇಟಿ ನೀಡಿದರು.