Categories: ಮನರಂಜನೆ

ಸ್ಟೇಶನ್ ಮೆಟ್ಟಿಲೇರಿದ ಖ್ಯಾತ ಕಿರುತೆರೆ ನಟ, ಕರನ್ ಮೆಹ್ರಾ

ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಯೇ ರಿಶ್ತಾ ಕ್ಯಾ ಕೆಹಲಾತಾ ಹೈ’ ಮೂಲಕ ಫೇಮಸ್​ ಆಗಿರುವ ನಟ ಕರಣ್​ ಮೆಹ್ರಾ ಅವರ ಸಂಸಾರದಲ್ಲಿ ಬಿರುಗಾಳಿ ಎದ್ದಿದೆ. ಪತ್ನಿ ನಿಶಾ ರಾವಲ್​ ಮೇಲೆ ಅವರು ಹಲ್ಲೇ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ. ಈ ಸಂಬಂಧ ಅವರನ್ನು ಸೋಮವಾರ (ಮೇ 31) ರಾತ್ರಿ ಪೊಲೀಸರು ಬಂಧಿಸಿದ್ದರು. ಆದರೆ ಈಗ ಜಾಮೀನಿನ ಮೇಲೆ ಅವರು ಹೊರಬಂದಿದ್ದಾರೆ.

ಜಾಮೀನು ಪಡೆದು ಹೊರಬಂದ ಬಳಿಕ ಪತ್ನಿ ವಿರುದ್ಧವೇ ಕರಣ್​ ಮೆಹ್ರಾ ಆರೋಪ ಮಾಡಿದ್ದಾರೆ. ಪತ್ನಿ ನಿಶಾ ರಾವಲ್​ ಮತ್ತು ಆಕೆಯ ಸಹೋದರ ರೋಹಿತ್​ ಸೇಟಿಯಾ ಸೇರಿಕೊಂಡು ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಕರಣ್​ ಹೇಳಿದ್ದಾರೆ. ಬಳಿಕ ತಮ್ಮನ್ನೇ ತಪ್ಪಿತಸ್ಥರ ರೀತಿ ಬಿಂಬಿಸಲು ಪ್ರಯತ್ನಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಕರಣ್​ ಮತ್ತು ನಿಶಾ ಸಂಸಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಅನುಮಾನ ಹಲವು ದಿನಗಳ ಹಿಂದೆಯೇ ಶುರುವಾಗಿತ್ತು.

ಆದರೆ ಈ ಬಗ್ಗೆ ಪ್ರತಿಕ್ರಿಯೆ ಕೇಳಲು ಮಾಧ್ಯಮದವರು ಪ್ರಯತ್ನಿಸಿದಾಗಲೇ ಆ ಸುದ್ದಿಯನ್ನು ಕರಣ್​ ತಳ್ಳಿ ಹಾಕುತ್ತಿದ್ದರು. ‘ನನ್ನ ಮತ್ತು ನಿಶಾ ನಡುವೆ ಯಾವುದೇ ಮನಸ್ತಾಪ ಇಲ್ಲ. ನಾವು ಚೆನ್ನಾಗಿ ಇದ್ದೇವೆ. ಈ ಕೊರೊನಾ ವೈರಸ್​ ಸಮಯದಲ್ಲಿ ಆಕೆ ನನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾಳೆ’ ಎಂದು ಅವರು ಹೇಳಿದ್ದರು. ಆದರೆ ಈಗ ಅವರ ಸಂಸಾರದ ರಗಳೆ ಬೀದಿಗೆ ಬಂದಿದೆ.

ನಿಶಾ ರಾವಲ್​ ನೀಡಿದ ದೂರಿನ ಮೇರೆಗೆ ಕರಣ್​ ಅವರನ್ನು ಪೊಲೀಸರು ಬಂಧಿಸಿದ್ದರು. ಒಂದು ರಾತ್ರಿ ಪೊಲೀಸ್​ ಠಾಣೆಯಲ್ಲಿ ಕಳೆದ ಬಳಿಕ ಮಂಗಳವಾರ (ಜೂ.1) ಬೆಳಗ್ಗೆ ಅವರಿಗೆ ಜಾಮೀನು ಸಿಕ್ಕಿದೆ. ಜಾಮೀನು ಪಡೆದು ಹೊರಬಂದ ಬಳಿಕ ತಮ್ಮ ಕುಟುಂಬದ ಕಹಿ ಸತ್ಯವನ್ನೆಲ್ಲ ಅವರು ಬಹಿರಂಗಪಡಿಸಿದ್ದಾರೆ. ಪತ್ನಿ ವಿರುದ್ಧ ಪ್ರತ್ಯಾರೋಪ ಮಾಡಿದ್ದಾರೆ.

ಒಂದು ಸುತ್ತಿನ ವಿಚಾರಣೆ ನಡೆಸಿರುವ ಪೊಲೀಸರಿಗೆ ಹಲವು ವಿಚಾರಗಳು ಗೊತ್ತಾಗಿವೆ. ಕರಣ್​ ಮತ್ತು ನಿಶಾ ನಡುವೆ ಹಲವು ದಿನಗಳಿಂದ ಸಂಬಂಧ ಕೆಟ್ಟಿತ್ತು. ಹಾಗಾಗಿ ಅವರು ವಿಚ್ಛೇದನ ಪಡೆಯಲು ಕೂಡ ನಿರ್ಧರಿದ್ದರು. ಅದಕ್ಕಾಗಿ ಅವರಿಬ್ಬರು ಈಗಾಗಲೇ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲು ಕೂಡ ಹತ್ತಿದ್ದಾರೆ ಎಂಬ ವಿಚಾರ ಈಗ ಬಯಲಾಗಿದೆ.

Desk

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

8 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

8 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

8 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

8 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

9 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

9 hours ago