ನವದೆಹಲಿ: ಸೋಮವಾರ ಇಟಲಿಯ ಮಿಲನ್ನಗರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ, ನಿರ್ಮಾಪಕಿ ಅನುಷ್ಕಾ ಶರ್ಮಾ ಜೋಡಿ ಇದೀಗ ಹನಿಮೂನ್ ಗೆ ರೋಮ್ಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.
ಈ ಜೋಡಿ ಒಂದು ವಾರ ರೋಮ್ ನಲ್ಲಿ ಇದ್ದು ಭಾರತಕ್ಕೆ ಹಿಂದಿರುಗಿದ ಬಳಿಕ ಮುಂಬೈ ಮತ್ತು ದೆಹಲಿಯಲ್ಲಿ ನಡೆಯುವ ಅದ್ಧೂರಿ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಆರತಕ್ಷತೆಯಲ್ಲಿ ಬಾಲಿವುಡ್ ನಟ–ನಟಿಯರು, ಕ್ರಿಕೆಟ್ ಆಟಗಾರರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.