ಕನ್ನಡ ಚಿತ್ರರಂಗದ ಹಿರಿಯ ನಟಿ ಮತ್ತು ಭರತನಾಟ್ಯ ನಿಪುಣೆ ಭಾವನಾ ರಾಮಣ್ಣ ಅವರು, ತಮ್ಮ 40ನೇ ವಯಸ್ಸಿನಲ್ಲಿ ಏಕಾಂಗಿಯಾಗಿ ತಾಯಿಯಾಗಲು ನಿರ್ಧಾರ ಮಾಡಿದ್ದಾರೆ.
ಐವಿಎಫ್ ತಂತ್ರಜ್ಞಾನದ ಸಹಾಯದಿಂದ ಈಗಾಗಲೇ ಆರು ತಿಂಗಳ ಗರ್ಭಿಣಿಯಾಗಿರುವ ಭಾವನಾ, ಈ ವರ್ಷದ ಅಂತ್ಯದಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡುವ ನಿರೀಕ್ಷೆಯಿದೆ.

